ಮುರುಘಾ ಶರಣರಿಗೆ ಮತ್ತೆ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ – vishwanews24

Featured, ರಾಜ್ಯ ನ್ಯೂಸ್

­ಮುರುಘಾ ಶರಣರಿಗೆ ಮತ್ತೆ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ

ಚಿತ್ರದುರ್ಗ : ಜಾಮೀನಿನಲ್ಲಿ ಕೆಲವೇ ದಿನಗಳ ಹಿಂದೆ ಬಿಡುಗಡೆಯಾಗಿದ್ದ ಮುರುಘಾ ಮಠದ ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರಿಗೆ ಇದೀಗ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.

ನ.16 ರಂದು ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದ ಮುರುಘಾ ಶ್ರೀಗಳಿಗೆ ಎರಡನೇ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ಬಂಧನಕ್ಕೆ ಆದೇಶಿಸಿದೆ.

ಇನ್ನು ಮುರುಘಾ ಶ್ರೀ ಅವರ ಬಿಡುಗಡೆಗೆ ಮೊದಲು ಎರಡನೇ ಪೋಕ್ಸೋ ಪ್ರಕರಣದ ಬಾಡಿ ವಾರೆಂಟ್ ಕುರಿತ ವಿಚಾರಣೆ ನಡೆಯುತ್ತಿತ್ತು. ವಿಚಾರಣೆ ನಡುವೆಯೇ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ನ.18 ರಂದು ನಡೆದ ನ್ಯಾಯಾಲಯ ಕಲಾಪದ ವೇಳೆ ಜಿಲ್ಲಾ ಕಾರಾಗೃಹದ ಬಿಡುಗಡೆ ಪ್ರಕ್ರಿಯೆ ಕುರಿತು ತನಿಖೆಗೆ ಆದೇಶಿಸಲಾಗಿತ್ತು.

ಇನ್ನು ಇದೇ ಪ್ರಕರಣದ ಆದೇಶವನ್ನು ನ.20 ಸೋಮವಾರಕ್ಕೆ ಕಾಯ್ದಿರಿಸಿದ್ದ‌ ನ್ಯಾಯಾಲಯ ನಾಳೆಯೊಳಗೆ ಬಂಧಿಸಿ ಕರೆತರುವಂತೆ ಆದೇಶಿಸಿದೆ.

Leave a Reply