ಮುರುಘಾ ಶ್ರೀಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ – Vishwanews24

Featured, ರಾಜ್ಯ ನ್ಯೂಸ್

ಮುರುಘಾ ಶ್ರೀಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳಿಗೆ ಬೇಲ್‌ ಸದ್ಯಕ್ಕಿಲ್ಲ. ಇದೀಗ ಮತ್ತೆ ಶ್ರೀಗಳನ್ನ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲು ಕೋರ್ಟ್‌ ಆದೇಶಿಸಿದೆ. ಸೆ.27 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಮುರುಘಾ ಶರಣರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 27 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಮುರುಘಾ ಶರಣ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಕೊನೆಯ ದಿನವಾಗಿದ್ದು, ಇಂದು ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ಇತ್ತು. ಕೋರ್ಟ್ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಶ್ರೀಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಗೋವಾ: 8 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆ – Vishwanews24

Leave a Reply