ಮೂಡಬಿದ್ರೆ : ಕೋಟಿ ಚೆನ್ನಯ ಜೋಡುಕೆರೆ ಕಂಬಳಕ್ಕೆ ಹೋದ ಯುವಕ ಬಾವಿಯಲ್ಲಿ ಶವವಾಗಿ ಪತ್ತೆ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಮೂಡಬಿದ್ರೆಯ ಕಡಲಕೆರೆ ನಿಸರ್ಗಧಾಮದಲ್ಲಿ ನಡೆದ ಕೋಟಿ ಚೆನ್ನಯ ಜೋಡುಕೆರೆ ಕಂಬಳಕ್ಕೆ ಹೋದ ಯುವಕ ಗುರುವಾರ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ವರದಿಯಾಗಿದೆ.

ಮಂಗಳೂರಿನ ಕಿನ್ನಿಗೋಳಿ ತೋಕೂರು ನಿವಾಸಿ ಲೋಹಿತ್ ದೇವಾಡಿಗ(26) ಸಾವನ್ನಪ್ಪಿದ ಯುವಕ.

ಈತ ಬುಧವಾರ ನಡೆದ ಕಂಬಳಕ್ಕಾಗಿ ಬಂದಿದ್ದು ರಾತ್ರಿಯೂ ಕಂಬಳದಲ್ಲಿ ಭಾಗಿಯಾಗಿದ್ದನು. ಆದರೆ ಗುರುವಾರ ಮುಂಜಾನೆ ಮನೆಗೂ ಬಾರದೆ ನಾಪತ್ತೆಯಾಗಿದ್ದನು. ಇದರಿಂದ ಹೆದರಿದ ಮನೆಯವರು ಎಲ್ಲರಲ್ಲಿ ವಿಚಾರಿಸಿದ್ದರು. ಆದರೆ ಕಂಬಳ ನಡೆದ ಪ್ರದೇಶದ ಒಂದು ತೆರೆದ ಬಾವಿಯಲ್ಲಿ ಲೋಹಿತ್ ಶವವಾಗಿ ಪತ್ತೆಯಾಗಿದ್ದಾನೆ.

ರೋಹಿತ್ ಅವರ ಮೃತದೇಹ ಒಂಟಿಕಟ್ಟೆಯಿಂದ ಸುಮಾರು ಮುಕ್ಕಾಲು ಕಿ.ಮೀ ದೂರದಲ್ಲಿನ ಎನಿಕ್ರಿಪಲ್ಲ ಎಂಬಲ್ಲಿರುವ ಆವರಣದ ಬಾವಿಯಲ್ಲಿ ಪತ್ತೆಯಾಗಿದ್ದು, ಮೃತದೇಹದಲ್ಲಿ ಗಾಯದ ಗುರುತುಗಳು ಕಂಡುಬಂದಿವೆ ಎಂದು ತಿಳಿದು ಬಂದಿದೆ.

ಸದ್ಯ ಮೂಡಬಿದ್ರೆ ಪೊಲೀಸರು ಪ್ರಕರಣ ದಾಖಲಿಸಿ ಕೊಲೆಯಾಗಿರಬಹುದು ಎಂದು ಶಂಕಿಸಿ, ತನಿಖೆ ಆರಂಭಿಸಿದ್ದಾರೆ.

ಘಟನೆಯ ಬಗ್ಗೆ ಮೃತನ ಸಹೋದರ ನಿಶ್ಚಿತ್ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.