ಮೂಡುಬಿದಿರೆ: ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – Vishwanews24
ಮೂಡುಬಿದಿರೆ: ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ
ಮೂಡುಬಿದಿರೆ: ನ್ಯಾಚುರೋಪತಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕೊಠಡಿಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ.
ಪ್ರಥಮ ವರ್ಷದ ವಿದ್ಯಾರ್ಥಿನಿ, ಮೈಸೂರು ಮೂಲದ ಮೇಘನಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಈಕೆ ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದು ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿದುಬಂದಿದೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಡಬ : ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು; ಐವರು ಗಂಭೀರ – Vishwanews24
