ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ – vishwanews24

Featured, ದಕ್ಷಿಣ ಕನ್ನಡ

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ; ಕೆಲಕಾಲ ಸಂಚಾರ ಅಸ್ತವ್ಯಸ್ತ

ಮೂಡುಬಿದಿರೆ: ಜನರೇಟರ್‌ ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಶನಿವಾರ ಬೆಳಗ್ಗೆ ಕೊಡ್ಯಡ್ಕದ ಮಿತ್ತಬೈಲು ಬಳಿ ರಸ್ತೆಯ ಮಧ್ಯದಲ್ಲೇ ಪಲ್ಟಿಯಾದ ಘಟನೆ ನಡೆದಿದೆ. ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಪಿಕಪ್ ವಾಹನವು ಪಾಲಡ್ಕದಿಂದ ಮೂಡುಬಿದ್ರೆ ಕಡೆಗೆ ತೆರಳುತ್ತಿದ್ದ ವೇಳೆ ಮಿತ್ತಬೈಲು ಬಳಿ ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದ ವಾಹನ ರಸ್ತೆಯಲ್ಲೇ ಪಲ್ಟಿಯಾಗಿದೆ.

ರಸ್ತೆಯ ಮಧ್ಯದಲ್ಲಿ ವಾಹನ ಪಲ್ಟಿಯಾಗಿ ಬಿದ್ದಿದ್ದರಿಂದ ಎರಡೂ ದಿಕ್ಕಿನ ವಾಹನಗಳ ಸಂಚಾರಕ್ಕೆ ತೊಂದರೆಯಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಮಾಹಿತಿ ತಿಳಿದು ಪೊಲೀಸರು ಹಾಗೂ ಸಂಬಂಧಪಟ್ಟ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪಲ್ಟಿಯಾಗಿದ್ದ ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.

ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ – vishwanews24

Leave a Reply