ಮೂರು ನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ನಡೆಸಲಿದೆ : ಸಂತಸ ವ್ಯಕ್ತಪಡಿಸಿದ ನಳಿನ್ -Vishwanews24

Featured, ರಾಜ್ಯ ನ್ಯೂಸ್

ಮೂರು ನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ನಡೆಸಲಿದೆ : ಸಂತಸ ವ್ಯಕ್ತಪಡಿಸಿದ ನಳಿನ್ -Vishwanews24

ಬೆಂಗಳೂರು: ಹುಬ್ಬಳ್ಳಿ ಧಾರವಾಡ, ಬೆಳಗಾವಿ, ಕಲಬುರಗಿ ಮೂರು ನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಾನಗರ ಪಾಲಿಕೆ ಚುನಾವಣೆಯು ಯಡಿಯೂರಪ್ಪನವರ ಆಶೀರ್ವಾದ, ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಿದೆ. ಈ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಬಿಜೆಪಿ ಪಡೆದಿದ್ದು, ಮೂರು ಪಾಲಿಕೆಗಳ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತದಾನ ಆಗಿದೆ. ಅದಕ್ಕಾಗಿ ನಾನು ಮತದಾರರಿಗೆ ಕೃತಜ್ಞತೆ ಆರ್ಪಿಸುತ್ತೇನೆ ಎಂದಿದ್ದಾರೆ.

25 ವರ್ಷಗಳ ಹಿನ್ನೆಲೆ ನೋಡಿದಾಗ ಬೆಳಗಾವಿಯಲ್ಲಿ ಪಾರ್ಟಿ ಹೆಸರಲ್ಲಿ ಸ್ಪರ್ಧೆ ಮಾಡಿರಲಿಲ್ಲ. ಈಗ ಪಕ್ಷದ ಚಿನ್ಹೆಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದೇವು, ಗೆಲುವು ಸಿಕ್ಕಿದೆ. ಮೂರು ನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ನಡೆಸಲಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಉಪಸ್ಥಿತರಿದ್ದರು.