ಮೃತ ಬಾಣಂತಿಯರ ಕುಟುಂಬಕ್ಕೆ ಕನಿಷ್ಠ 25 ಲಕ್ಷ ರೂ. ಪರಿಹಾರ ತಕ್ಷಣ ಘೋಷಿಸಿ : ವಿಜಯೇಂದ್ರ ಆಗ್ರಹ – vishwanews24

Featured, ರಾಜ್ಯ ನ್ಯೂಸ್

ಕಾಂಗ್ರೆಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಿರಂತರ ಹೋರಾಟ ಮಾಡುತ್ತಿದೆ : ಬಿ.ವೈ.ವಿಜಯೇಂದ್ರ 

ಶಿವಮೊಗ್ಗ : ಮುಖ್ಯಮಂತ್ರಿಗಳೇ ನಿಮಗೆ ಮನುಷ್ಯತ್ವ ಇದ್ದರೆ ಈ ರಾಜ್ಯದ ಸಿಎಂ ಸ್ಥಾನಕ್ಕೆ ಗೌರವ ತರುವ ಕಿಂಚಿತ್ತು ಕಾಳಜಿ ಇದ್ದರೆ ಮೃತ ಬಾಣಂತಿಯರ ಕುಟುಂಬಕ್ಕೆ ಕನಿಷ್ಠ 25 ಲಕ್ಷ ರೂ. ಪರಿಹಾರವನ್ನು ತಕ್ಷಣ ಘೋಷಿಸಿ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.

ಇಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಇಂದು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ರಾಜೀನಾಮೆ ಪಡೆದುಕೊಳ್ಳಿ ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

Delhi Assembly Election : 29 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ – vishwanews24

ಅನಾಥ ಮಕ್ಕಳನ್ನು ರಾಜ್ಯ ಸರಕಾರ ದತ್ತು ತೆಗೆದುಕೊಳ್ಳಬೇಕು; ಆಗ ಮಾತ್ರ ಭಗವಂತ ನಿಮ್ಮನ್ನು ಕ್ಷಮಿಸಲು ಸಾಧ್ಯ ಎಂದು ತಿಳಿಸಿದರು. ಕಾಂಗ್ರೆಸ್ಸಿನ ದುಷ್ಟ ಸರಕಾರ ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ. ಈ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಿರಂತರ ಹೋರಾಟ ಮಾಡುತ್ತಿದೆ ಎಂದು ವಿವರಿಸಿದರು.

ಬಾಣಂತಿಯರು, ನವಜಾತ ಶಿಶುಗಳ ಸಾವಿನ ವಿಚಾರಕ್ಕೆ ಸಂಬಂಧಿಸಿ ಮಹಿಳಾ ಮೋರ್ಚಾದಿಂದ ರಾಜ್ಯಾದ್ಯಂತ ಹೋರಾಟ ನಡೆದಿದೆ ಎಂದು ತಿಳಿಸಿದರು

ಉಡುಪಿ: ಕುಸಿದು ಬಿದ್ದು ಯುವತಿ ಸಾವು – vishwanews24

Leave a Reply