ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು – vishwanews24
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು
ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಮೆಜೆಸ್ಟಿಕ್) ರೈಲು ನಿಲ್ದಾಣದಲ್ಲಿ ಭಾನುವಾರ ತಡರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಪ್ಲಾಟ್ಫಾರ್ಮ್ ನಂ. 1ರಲ್ಲಿ ನಿಲ್ಲಿಸಲಾಗಿದ್ದ ರೈಲಿನ ಖಾಲಿ ಬೋಗಿಯೊಂದು ಬೆಂಕಿಗಾಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ರಾತ್ರಿ ಸುಮಾರು 11.30ರ ವೇಳೆಗೆ ಖಾಲಿ ಬೋಗಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿಯ ಕೆನ್ನಾಲಿಗೆ ಇಡೀ ಬೋಗಿಯನ್ನು ಆವರಿಸಿದೆ. ಪರಿಣಾಮ ನಿಲ್ದಾಣದ ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆ ವೇಳೆ ಬೋಗಿಯಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ಹೀಗಾಗಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ರೈಲ್ವೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಮಂಗಳೂರು: ಹೋಮ್ ಸ್ಟೇ ಹೆಸರಿನಲ್ಲಿ ಲಾಡ್ಜ್ಗಳಿಗೆ ಅವಕಾಶವಿಲ್ಲ: ಸಚಿವ ಕೆ.ಜೆ. ಜಾರ್ಜ್ – vishwanews24
ಪ್ರಾಥಮಿಕವಾಗಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಬೆಂಕಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬೆಂಕಿ ಅವಘಡದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.
