ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ : ಸಚಿವ ಬಿ.ಸಿ.‌ನಾಗೇಶ್ – Vishwanews24

Featured, ರಾಜ್ಯ ನ್ಯೂಸ್

ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ : ಸಚಿವ ಬಿ.ಸಿ.‌ನಾಗೇಶ್

ತುಮಕೂರು: ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಇಂದಿನಿಂದ(ಮಾ.9) ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಸಚಿವರು ತಿಪಟೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.’

ಪಡುಬಿದ್ರಿ : ದಟ್ಟ ಆಲದ ಮರದ ಕೆಳಗೆ ಎರಡು ಬೃಹತ್ ಗಾತ್ರದ ವೀರಗಲ್ಲು – Vishwanews24

ಒಟ್ಟು 5,716 ಕಾಲೇಜುಗಳಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಎಚ್ಚರವಹಿಸಲು 1,109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತ ದಳ, 525 ತಾಲೂಕು ಜಾಗೃತ ದಳ ಮತ್ತು 2373 ವಿಶೇಷ ಜಾಗೃತ ದಳದವರನ್ನು ನೇಮಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆ ನಡೆಸಲಾಗುವುದು’ ಎಂದು ತಿಳಿಸಿದರು.

ಬಂಟ್ವಾಳ :  ಡ್ರೈವಿಂಗ್ ನಲ್ಲಿರುವಾಗ ಚಾಲಕನಿಗೆ ಬಾಧಿಸಿದ ಮೂರ್ಚೆ ರೋಗ – ವಾಹನಗಳಿಗೆ ಡಿಕ್ಕಿ ಹೊಡೆದು ಪೆಟ್ರೋಲ್ ಬಂಕ್ ನುಗ್ಗಿದ ಲಾರಿ – Vishwanews24

Leave a Reply