ಮೇ.8 (ನಾಳೆ) SSLC ಪರೀಕ್ಷೆ ಫಲಿತಾಂಶ ಪ್ರಕಟ – Vishwanews24

Featured, ರಾಜ್ಯ ನ್ಯೂಸ್

ಮೇ.8 (ನಾಳೆ) SSLC ಪರೀಕ್ಷೆ ಫಲಿತಾಂಶ ಪ್ರಕಟ 

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶಕ್ಕೆ ದಿನಾಂಕ ಘೋಷಣೆಯಾಗಿದೆ. ಮೇ.8ರಂದು ಬೆಳಿಗ್ಗೆ 10ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಘೋಷಣೆಯಾಗಲಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. ಮಾರ್ಚ್ 2023ರ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 31-03-2023ರಿಂದ 15-04-2023ರವರೆಗೆ ನಡೆಸಲಾಯಿತು ಎಂದಿದ್ದಾರೆ.

ಉಡುಪಿ : ಕಾಂಗ್ರೇಸ್ ಪ್ರಣಾಳಿಕೆ ಯಥಾವತ್ತಾಗಿ ಜಾರಿಗೆ ಬಂದರೆ ತಲೆಬೋಳಿಸಿ ಕೆಪಿಸಿಸಿ ಕಚೇರಿ ಮುಂದೆ ಕೂರುತ್ತೇನೆ : ಕುಯಿಲಾಡಿ ಸುರೇಶ್ ನಾಯಕ್ – Vishwanews24

ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 08-05-2023ರಂದು ಬೆಳಿಗ್ಗೆ 10 ಗಂಟೆಗೆ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯ ಜಾಲತಾಣ https://karresults.nic.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ.

ಮೇ. 8ರಂದು ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ಬೈಕ್ ಜಾಥಾ – Vishwanews24

Leave a Reply