ಮೈತ್ರಿ ಸರ್ಕಾರಕ್ಕೆ ಮತ್ತೊಂದು ಶಾಕ್ !! ಶಾಸಕ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ರೋಷನ್ ಬೇಗ್ ರಾಜಿನಾಮೆ -Vishwanews24
ಬೆಂಗಳೂರು:ಮೈತ್ರಿ ಸರ್ಕಾರದ 13 ಶಾಸಕರು ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಮೈತ್ರಿ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು, ಶಾಸಕ ರೋಷನ್ ಬೇಗ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.ಶಿವಾಜಿನಗರದ ಶಾಸಕ ರೋಷನ್ ಬೇಗ್ ಅವರು ಇಂದು ಸ್ಪೀಕರ್ ರಮೇಶ್ ಕುಮಾರ್ ಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ರಾಜಕೀಯ ಸಮನ್ವಯತೆ ಪಕ್ಷಗಳಲ್ಲಿ ಚೆನ್ನಾಗಿದ್ದಿದ್ದರೆ ಇಂದಿನ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದ ಅವರು, ಈ ವೇಳೆ ಯಾರ ಬಗ್ಗೆಯೂ ಟೀಕೆ ಟಿಪ್ಪಣಿ ಮಾಡಲು ಇಚ್ಛಿಸಲ್ಲ. ರಾಮಲಿಂಗಾ ರೆಡ್ಡಿ ಮತ್ತು ನಾವು ವಿದ್ಯಾರ್ಥಿ ಚಳುವಳಿಯ ಸಮಯದಿಂದ ರಾಜಕೀಯದಲ್ಲಿದ್ದವರು. ಲೋಕಸಭಾ ಚುನಾವಣೆಯಲ್ಲಿ ಯಾವ ನಾಯಕರು ರಾಮಲಿಂಗಾ ರೆಡ್ಡಿ ಅವರನ್ನು ಸಂಪರ್ಕಿಸಿ ಸಲಹೆ ಪಡೆಯಲಿಲ್ಲ. ಇದೀಗ ಎಲ್ಲರಿಗೂ ನಾವು ಬೇಕಾಗಿದ್ದೇವೆ. ನನಗೆ ಮಂತ್ರಿ ಆಗಲು ಇಷ್ಟವಿಲ್ಲ. ಯಾವ ಮಂತ್ರಿ ಪದವಿಯೂ ನನಗೆ ಬೇಡ ಎಂದರು.
ಲೋಕಸಭಾ ಚುನಾವಣೆಯ ನಂತರ ಬಹಿರಂಗವಾಗಿಯೇ ಸಿದ್ದರಾಮಯ್ಯ ವಿರುದ್ಧ ಅಸಮಾಧಾನವನ್ನು ಹೊರ ಹಾಕಿದ್ದಕ್ಕೆ ರೋಷನ್ ಬೇಗ್ ಅವರನ್ನು ಕಾಂಗ್ರೆಸ್ಸಿನಿಂದ ಉಚ್ಚಾಟಿಸಲಾಗಿತ್ತು.

