ಮೈಸೂರು ದಸರಾ : ಸೆಪ್ಟೆಂಬರ್ 20 ರಿಂದ ಒಂದು ತಿಂಗಳು ದಸರಾ ಸಂಭ್ರಮ – Vishwanews24

Featured, ರಾಜ್ಯ ನ್ಯೂಸ್

ಮೈಸೂರು ದಸರಾ : ಸೆಪ್ಟೆಂಬರ್ 20 ರಿಂದ ಒಂದು ತಿಂಗಳು ದಸರಾ ಸಂಭ್ರಮ ..

ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು- ಸಿಎಂ ಬೊಮ್ಮಾಯಿ ಘೋಷಣೆ..

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆಚರಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಮೈಸೂರು ದಸರಾ ನಿಮಿತ್ತ ನಡೆಯುವಂತ ಜಂಬೂಸವಾರಿಯನ್ನು ಅಕ್ಟೋಬರ್ 5ರಂದು ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ಸಿದ್ಧತೆ ಆರಂಭವಾಗಿದೆ. ಸೆ.20ರ ಮಂಗಳವಾರದಿಂದ ಸಿಂಹಾಸನ ಜೋಡಣೆ ಆರಂಭವಾಗಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರಗೆ ಅರಮನೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೆ.26ರಂದು ಖಾಸಗಿ ದರ್ಬಾರ್ ಹಾಗೂ ವಿವಿಧ ಪೂಜೆಗಳು, ಧಾರ್ಮಿಕ ವಿಧಿಗಳು ನೆರವೇರಲಿವೆ.

ಮಾತಿನಲ್ಲಿ ಹಿಡಿತವಿರಲಿ,ಪರರನ್ನು ಅಗೌರವಿಸಬೇಡಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಅಕ್ಟೋಬರ್ 4ರಂದು ಅರಮನೆಯಲ್ಲಿ ಆಯುಧಪೂಜೆ ನಡೆಯಲಿದೆ. ಅ.5ರಂದು ವಿಜಯದಶಮಿ ಆಚರಣೆ ಇರುತ್ತದೆ. ಅ.20ರಂದು ಸಿಂಹಾಸನ ವಿಸರ್ಜನೆ‌ ಹಿನ್ನೆಲೆಯಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಇರುತ್ತದೆ.

ಪ್ರಸಕ್ತ ಸಾಲಿನ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ  ಘೋಷಣೆ ಮಾಡಿದ್ದಾರೆ.

ಉಡುಪಿ: ಇಂದ್ರಾಳಿ ಬ್ರಿಡ್ಜ್ ಬಳಿಯ ರಸ್ತೆ ಅವ್ಯವಸ್ಥೆ ಖಂಡಿಸಿ ಉರುಳು ಸೇವೆ ಮಾಡುವ ಮೂಲಕ ಪ್ರತಿಭಟಿಸಿದ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು – Vishwanews24

Leave a Reply