ಮೋದಿ ನಾಯಕತ್ವದಲ್ಲಿ ಮಹಾನ್ ರಾಷ್ಟ್ರವು ಎಲ್ಲಾ ನಾಗರಿಕರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ತರಲಿ : ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಚ್ಡಿಡಿ -Vishwanews24
ಮೋದಿ ನಾಯಕತ್ವದಲ್ಲಿ ಮಹಾನ್ ರಾಷ್ಟ್ರವು ಎಲ್ಲಾ ನಾಗರಿಕರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ತರಲಿ : ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಚ್ಡಿಡಿ -Vishwanews24
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು 71ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.
ಮಾಜಿ ದೇವೇಗೌಡರು, 71ನೇ ಹುಟ್ಟುಹಬ್ಬದ ಶುಭಾಶಯಗಳು. ನರೇಂದ್ರ ಮೋದಿಯವರಿಗೆ ಉತ್ತಮ ಆರೋಗ್ಯವನ್ನು ಕರುಣಿಸಲಿ ಎಂದು ನಾನು ಸರ್ವಶಕ್ತ ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರ ನಾಯಕತ್ವದಲ್ಲಿ ಮಹಾನ್ ರಾಷ್ಟ್ರವು ಎಲ್ಲಾ ನಾಗರಿಕರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ತರಲಿ ಎಂದು ಟ್ವೀಟ್ ಮಾಡಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ, ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭಾಶಯಗಳು. ರಾಷ್ಟ್ರದ ಸೇವೆ ಮಾಡಲು ಅವರಿಗೆ ಹೆಚ್ಚಿನ ಶಕ್ತಿ, ಸ್ಫೂರ್ತಿ ಮತ್ತು ಆರೋಗ್ಯವನ್ನು ಕರುಣಿಸಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.
I wish Shri @narendramodi a very happy 71st birthday. I pray to almighty God to bless him with good health. May his leadership of our great nation bring peace and prosperity to all its citizens.
— H D Devegowda (@H_D_Devegowda) September 17, 2021
ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ಸೇವೆ ಮತ್ತು ಸಮರ್ಪಣಾ ಅಭಿಯಾನವನ್ನು ಆಯೋಜಿಸಿದೆ. ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಸೆ.17ರಿಂದ ಅ.7ರ ವರೆಗೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ 30ಲಕ್ಷ ಜನರಿಗೆ ಲಸಿಕೆ ಹಾಕಿಸುವ ಸಂಕಲ್ಪ ಮಾಡಲಾಗಿದೆ. ಕರ್ನಾಟಕದ ಕಾವೇರಿ, ಮಲಪ್ರಭಾ, ಕೃಷ್ಣಾ ನದಿ ಸೇರಿ ಭಾರತದ ಎಲ್ಲ 71 ನದಿಗಳ ಸ್ವಚ್ಛತಾ ಕಾರ್ಯ ನಡೆಸಲು ಬಿಜೆಪಿ ಮುಂದಾಗಿದೆ.
