ಮೋದಿ ಮತ್ತೆ ಪ್ರಧಾನಿ ಆಗಲೆಂದು ಬಿಎಸ್‌ವೈ ಪುತ್ರನಿಂದ ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ

Featured, ರಾಜ್ಯ ನ್ಯೂಸ್

ಮೈಸೂರು: ಮತ್ತೆ ನರೇಂದ್ರ ಮೋದಿ ಭಾರತದ ಪ್ರಧಾನಿಯಾಗಬೇಕು ಎಂದು ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಬರಿಗಾಲಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ಇಂದು ಆಷಾಢ ಮಾಸದ ನಾಲ್ಕನೇ ಶುಕ್ರವಾರ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿರುವ ಬಿಜೆಪಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ, 1001 ಮೆಟ್ಟಿಲು ಹತ್ತಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಮತ್ತು ದೇಶಕ್ಕೆ ಒಳ್ಳೆಯದಾಗಲಿ ಎಂದು ಬೆಟ್ಟ ಹತ್ತುತ್ತಿದ್ದೇನೆ. ಇದರಲ್ಲಿ ವೈಯಕ್ತಿಕ ರಾಜಕೀಯ ಅಥವಾ ಇನ್ಯಾವುದೇ ಇಚ್ಛಾಶಕ್ತಿ ಇಲ್ಲ. ಯಾವುದೇ ರಾಜಕೀಯ ವಿಚಾರದ ಬಗ್ಗೆ ನಾನು ಈಗ ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ.