ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ನಾನು ಹಿಂದೆ ಸರಿಯಲ್ಲ : ಈಶ್ವರಪ್ಪ – Vishwanews24

Featured, ರಾಜ್ಯ ನ್ಯೂಸ್

ಪಕ್ಷೇತರ ಸ್ಪರ್ಧೆ ಮಾಡಿ , ಗೆದ್ದು ನರೇಂದ್ರ ಮೋದಿಯವರ ಕೈ ಬಲಪಡಿಸುತ್ತೇನೆ : ಈಶ್ವರಪ್ಪ

ಶಿವಮೊಗ್ಗ,: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರ ಮನವೊಲಿಸುವ ಸಂಘ ಪರಿವಾರದ ಪ್ರಯತ್ನವೂ ವಿಫಲವಾಗಿದೆ ಎನ್ನಲಾಗಿದೆ.

ಈಶ್ವರಪ್ಪರಿಗೆ ಸಂಘ ಪರಿವಾರದ ಪ್ರಮುಖ ಗೋಪಾಲ್ ಅಯೋಧ್ಯೆಯಿಂದ ಕರೆ ಮಾಡಿ ಮನವೊಲಿಸಲು ಯತ್ನಿಸಿದ್ದಾರೆ. ಆದರೆ ಈಶ್ವರಪ್ಪ ಮಾತ್ರ ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ನಾನು ಹಿಂದೆ ಸರಿಯಲ್ಲ ಎಂದಿದ್ದಾರೆ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ಮಡಿಕೇರಿ  :  ನಕ್ಸಲರ ಸಂಚಾರದ ಶಂಕೆ – ಪೊಲೀಸ್ ಕಟ್ಟೆಚ್ಚರ ; ಕೂಂಬಿಂಗ್ ಆರಂಭ – Vishwanews24

 

ಶಿವಮೊಗ್ಗದ ಬೀಳಗಿಯ ರಾಚಟೇಶ್ವರ ಮಠದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನ ಹೋರಾಟ ಕುಟುಂಬ ರಾಜಕಾರಣ ವಿರುದ್ಧ. ಸಿಟಿ ರವಿ, ಬಸನಗೌಡ ಪಾಟೀಲ್ ಯತ್ನಾಳ, ನಳಿನ್ ಕುಮಾರ್ ಕಟೀಲು ಅವರಿಗೆ ಟಿಕೆಟ್ ನೀಡಿಲ್ಲ. ಪ್ರಧಾನಿ ಮೋದಿಯವರು ಕಾಂಗ್ರೆಸ್ ಪಕ್ಷದ ಕುಟುಂಬ ರಾಜಕಾರಣ ವಿರೋಧ ಮಾಡಿದರು. ಆದರೆ ಕರ್ನಾಟಕದಲ್ಲಿ ಬಿ.ಎಸ್ ಯಡಿಯೂರಪ್ಪರ ಪುತ್ರನಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದರು.
ಇಂದು ಪ್ರಧಾನಿ ನರೇಂದ್ರ ಮೋದಿಯ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಾನು ಹೋಗುವುದಿಲ್ಲ, ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತಿದ್ದೇನೆ. ಗೆದ್ದು ನರೇಂದ್ರ ಮೋದಿಯವರ ಕೈ ಬಲಪಡಿಸುತ್ತೇನೆ. ಕೇಂದ್ರದ ನಾಯಕರು ದೂರವಾಣಿ ಸಂಪರ್ಕ ಮಾಡಿದರೂ, ಸ್ಪಷ್ಟ ನಿರ್ಧಾರ ಹೇಳಿದ್ದೇನೆ. ಯಾವುದೇ ಕಾರಣಕ್ಕೂ ನನ್ನ ನಿರ್ಧಾರದಿಂದ ಹಿಂದೆ ಸರಿಯಲ್ಲ ಎಂದು ತಿಳಿಸಿದರು.

ನನ್ನನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿರುವುದು ನಿಜ , ನಾಳೆ ನನ್ನ ನಿರ್ಧಾರ ತಿಳಿಸುತ್ತೇನೆ : ಡಿ.ವಿ. ಸದಾನಂದಗೌಡ – Vishwanews24

 

Leave a Reply