ಯುಗಾದಿ ಹಾಗೂ ರಂಜಾನ್ ಹಬ್ಬ : ಮಾ.18ರಿಂಂದ 20ರವರೆಗೆ KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ – vishwanews24
ಯುಗಾದಿ ಹಾಗೂ ರಂಜಾನ್ ಹಬ್ಬ : ಮಾ.18ರಿಂಂದ 20ರವರೆಗೆ KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ
ಬೆಂಗಳೂರು: ಯಗಾದಿ ಹಾಗೂ ರಂಜಾನ್ ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಿದ್ದು, ವಿಶೇಷ ರಿಯಾಯಿತಿಯನ್ನು ಘೋಷಿಸಿದೆ.
ಮಾ.18, 19 ಹಾಗೂ 20ರಂದು ಬೆಂಗಳೂರಿನಿಂದ ಬೇರೆ ರಾಜ್ಯ ಹಾಗೂ ಬೇರೆ ಜಿಲ್ಲೆಗಳಿಗೆ ಒಟ್ಟು 2,000 ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಿದೆ. ಜೊತೆಗೆ ಹಬ್ಬದ ಹಿನ್ನೆಲೆ ವಿಶೇಷ ರಿಯಾಯಿತಿಯನ್ನು ನೀಡಿದೆ.
ಬಸ್ ಬುಕ್ ಮಾಡುವಾಗ ನಾಲ್ಕು ಹಾಗೂ ಹೆಚ್ಚಿನ ಟಿಕೆಟ್ ಬುಕ್ ಮಾಡಿದರೆ 5% ರಿಯಾಯಿತಿ ನೀಡಲಾಗಿದೆ. ಜೊತೆಗೆ ಹೋಗುವ ಮತ್ತು ಬರುವ ಟಿಕೆಟ್ ಒಟ್ಟಾಗಿ ಬುಕ್ ಮಾಡಿದರೆ 10% ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದೆ.
ಇದನ್ನೂ ಓದಿ:
