ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ – vishwanews24
ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ
ಬೆಂಗಳೂರು: ನಟ ಯುವರಾಜ್ ಕುಮಾರ್ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯ ವಿಚಾರಣೆ ಗುರುವಾರ(ಜು.4ರಂದು) ನಡೆದಿದೆ.
ಬೆಂಗಳೂರಿನ 1 ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ನಡೆದಿದೆ. ನ್ಯಾಯಾಧೀಶೆ ಕಲ್ಪನಾ ಅವರಿದ್ಧ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು.
ಅರ್ಜಿ ವಿಚಾರಣೆ ವೇಳೆ ಶ್ರೀದೇವಿ ಭೈರಪ್ಪ ಅವರ ಪರ ವಕೀಲರು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಮನವಿಗೆ ಸ್ಪಂದಿಸಿರುವ ನ್ಯಾಯಾಧೀಶೆ ಇದು ಕೌಟುಂಬಿಕ ಕಲಹವಾಗಿರುವ ಕಾರಣದಿಂದ ಮೊದಲು ಈ ಪ್ರಕರಣದ ಮಿಡಿಯೇಷನ್ ಕೌನ್ಸಿಲಿಂಗ್ ಮುಕ್ತಾಯವಾಗಲಿ. ಕೌನ್ಸಿಲಿಂಗ್ ಮುಕ್ತಾಯದ ಬಳಿಕ ಇಬ್ಬರ ತೀರ್ಮಾನ ಕೇಳಬೇಕು. ಬಳಿಕ ವಿಚ್ಚೇದನದ ಆಕ್ಷೇಪಣೆ ಕೇಳುವುದಾಗಿ ಹೇಳಿ ವಿಚಾರಣೆಯನ್ನು ಆ.23 ಕ್ಕೆ ಮಿಡಿಯೇಷನ್ ದಿನಾಂಕ ನಿಗದಿ ಮಾಡಿ ವಿಚಾರಣೆ ಮುಂದೂಡಿದೆ.
ಕಾಪು : ಪಾದೂರು, ಹೇರೂರು ಪರಿಸರದಲ್ಲಿ ಚಿರತೆ ಕಾಟ – ಆತಂಕದಲ್ಲಿ ಗ್ರಾಮಸ್ಥರು – vishwanews24
ಶ್ರೀದೇವಿ ಭೈರಪ್ಪ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು,” ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ. ಹಾಗೂ ಅದಕ್ಕಾಗಿ ನಾನು ಹೋರಾಡುತ್ತೇನೆ ಎಂದು ಪುನರುಚ್ಚರಿಸುತ್ತೇನೆ. ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ಹೆದರುವುದಿಲ್ಲ” ಎಂದು ಹೇಳಿದ್ದಾರೆ.
