ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ
ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. 17 ಜನರನ್ನು ಅಪರಾಧಿ ಎಂದು ಕೋರ್ಟ್ ಘೋಷಣೆ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಏ.16) 17 ಶಿಕ್ಷೆ ಪ್ರಮಾಣ ನಿರ್ಧಾರವಾಗಬೇಕಿತ್ತು, ಆದರೆ ಇದೀಗ ಶಿಕ್ಷೆ ಪ್ರಮಾಣವನ್ನು ನಾಳೆ (ಏ.17) ತಿಳಿಸಲಾಗುವುದು ಎಂದು ಕೋರ್ಟ್ ಹೇಳಿದೆ. ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಧಾರವಾಡದ ಯೋಗೀಶ್ ಗೌಡ ಹತ್ಯೆ ಪ್ರಕರಣದ ಅಂತಿಮ ಘಟ್ಟ ತಲುಪಿದೆ.
ಇಂದು ನ್ಯಾಯಾಲಯದಲ್ಲಿ ಶಿಕ್ಷೆಯ ಪ್ರಮಾಣದ ಬಗ್ಗೆ ವಾದ-ಪ್ರತಿವಾದ ನಡೆಯಿತು. ಈ ವೇಳೆ ಪ್ರತಿಯೊಬ್ಬ ಅಪರಾಧಿಯೂ ತಮಗೆ ಕಡಿಮೆ ಶಿಕ್ಷೆ ನೀಡುವಂತೆ ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟಿದ್ದಾರೆ. “ನಾನು ಕಳೆದ 27 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ, ಯಾರಿಗೂ ತೊಂದರೆ ಕೊಟ್ಟಿಲ್ಲ. ಮದುವೆ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕೃಷಿಕನಾದ ನಾನು ಸಾವಿರಾರು ಹಸುಗಳನ್ನು ಸಾಕುತ್ತಿದ್ದೇನೆ. ರಾಜಕೀಯ ಕಾರಣಕ್ಕೆ ನನ್ನ ಮೇಲೆ ಕೇಸ್ ಹಾಕಲಾಗಿದೆ” ಎಂದು ವಿನಯ್ ಕುಲಕರ್ಣಿ ಕೋರ್ಟ್ ಮುಂದೆ ಹೇಳಿದ್ದಾರೆ.
ಇದನ್ನೂ ಓದಿ:
ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24
