ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – vishwanews24

Featured, ರಾಜ್ಯ ನ್ಯೂಸ್

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ  ಅಪರಾಧಿಗಳಿಗೆ ಕೊನೆಗೂ ಶಿಕ್ಷೆ ಪ್ರಕಟವಾಗಿದೆ. ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ  ಸೇರಿದಂತೆ ಎಲ್ಲಾ 16 ಅಪರಾಧಿಗಳಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ. 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಓರ್ವ ಆರೋಪಿ ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.

Leave a Reply