ರನ್ಯಾ ರಾವ್  ಚಿನ್ನ ಕಳ್ಳಸಾಗಣೆ ಪ್ರಕರಣ  ಸೂಕ್ತ ತನಿಖೆಯಾಗಲಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್  – vishwanews24

Featured, ರಾಜ್ಯ ನ್ಯೂಸ್

ರನ್ಯಾ ರಾವ್  ಚಿನ್ನ ಕಳ್ಳಸಾಗಣೆ ಪ್ರಕರಣ  ಸೂಕ್ತ ತನಿಖೆಯಾಗಲಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ 

ಬೆಂಗಳೂರು: ಚಿತ್ರನಟಿ ರನ್ಯಾ ರಾವ್  ಚಿನ್ನ ಕಳ್ಳಸಾಗಣೆ ಪ್ರಕರಣ  ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂಬ ಆರೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಕರಣ ಸೂಕ್ತ ತನಿಖೆಯಾಗಲಿ, ಆಗ ಗೊತ್ತಾಗಲಿದೆ ಎಂದರು.

ಗುಡ್ ಫ್ರೈಡೆ ದಿನ ನಿಗಿದಿಯಾಗಿರೋ ಸಿಇಟಿ ಪರೀಕ್ಷೆ ಮುಂದೂಡಿ: ಐವಾನ್ ಡಿಸೋಜ ಆಗ್ರಹ – vishwanews24

ಗ್ಯಾರಂಟಿ ಸಮಿತಿಗಳ ವಿರುದ್ಧದ ಬಿಜೆಪಿ ಪ್ರತಿಭಟನೆ ಕುರಿತು ಮಾತನಾಡಿದ ಅವರು, 2023ರಲ್ಲಿ ಸರ್ಕಾರ ರಚನೆಯಾದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಬಳಿಕ ಸೂಕ್ತ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ದೃಷ್ಟಿಯಿಂದ ಗ್ಯಾರಂಟಿ ಸಮಿತಿಗಳನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರಚಿಸಲಾಯಿತು. ಈಗ ಸಮಿತಿಗಳನ್ನು ರದ್ದುಗೊಳಿಸುವಂತೆ ಪ್ರತಿಪಕ್ಷಗಳು ನಡೆಸುತ್ತಿರುವ ಹೋರಾಟಕ್ಕೆ ಅರ್ಥವಿಲ್ಲ ಎಂದು ಹೇಳಿದರು.

 

Leave a Reply