ರಸ್ತೆ ಅಪಘಾತ : ಆರ್ಎಸ್ಎಸ್ ಹಿರಿಯ ಕಾರ್ಯಕರ್ತ ಸಾವು -Vishwanews24
ರಸ್ತೆ ಅಪಘಾತ : ಆರ್ಎಸ್ಎಸ್ ಹಿರಿಯ ಕಾರ್ಯಕರ್ತ ಸಾವು -Vishwanews24
ಬಂಟ್ವಾಳ,: ಪುತ್ತೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಮಂಗಳವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರೆಸ್ಸೆಸ್ ಹಿರಿಯ ಮುಖಂಡರೊಬ್ಬರು ಮೃತಪಟ್ಟಿದ್ದಾರೆ.
ಬಿ.ಸಿ.ರೋಡಿನ ಅಗ್ರಬೈಲ್ ನಿವಾಸಿ, ಆರೆಸ್ಸೆಸ್ ಮಂಗಳೂರು ವಿಭಾಗ ಗ್ರಾಮವಿಕಾಸ ಪ್ರಮುಖರೂ ಆಗಿದ್ದ ವೆಂಕಟರಮಣ ಹೊಳ್ಳ (60) ಮೃತಪಟ್ಟವರು.
ಅವರು ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಕಡಬ ಬಳಿಯ ಪೋಳ್ಯದಲ್ಲಿ ಬೈಕ್ ರಸ್ತೆ ವಿಭಜಕಕ್ಕೆ ಢಿಕ್ಕೆ ಹೊಡೆದಿದೆ ಎಂದು ತಿಳಿದು ಬಂದಿದೆ.
ವೆಂಕಟ್ರಮಣ ಹೊಳ್ಳ ಅವರ ಮ್ರತ ದೇಹ ಘಟನೆಯ ತುಸು ದೂರ ಬಿದ್ದಿದ್ದು ಅವರ ತಲೆ ಜಜ್ಜಿ ಹೋಗಿದೆ. ವೆಂಕಟ್ರಮಣ ಹೊಳ್ಳ ಅವರು ಚಲಾಯಿಸುತ್ತಿದ್ದ ಬೈಕ್ಗೆ ಬೇರೆ ಯಾವುದೋ ವಾಹನ ಡಿಕ್ಕಿಯಾಗಿ ಹೋಗಿರಬಹುದೇ ಎಂಬ ಶಂಕೆಯು ವ್ಯಕ್ತವಾಗುತ್ತಿದೆ. ಪುತ್ತೂರು ನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ಇತ್ತೀಚೆಗೆ ಗ್ರಾಮ ವಿಕಾಸ ಸಮಿತಿಯ ಮಂಗಳೂರು ವಿಭಾಗ ಸಂಚಾಲಕರಾಗಿ ಬಿ.ಸಿ.ರೋಡ್, ಸುಳ್ಯ, ಪುತ್ತೂರು ಸಹಿತ ಹಲವೆಡೆ ಯುವಕರಿಗೆ ಆತ್ಮನಿರ್ಭರರಾಗುವ ಉದ್ಯೋಗ ತರಬೇತಿ ಆಯೋಜಿಸುವ ಮೂಲಕ ವೆಂಕಟರಮಣ ಹೊಳ್ಳ ಗಮನ ಸೆಳೆದಿದ್ದರು.
