ರಸ್ತೆ ಬದಿಯ ಮೋರಿಗೆ ಬೈಕ್  ಢಿಕ್ಕಿ  : ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು – vishwanews24

Featured, ರಾಜ್ಯ ನ್ಯೂಸ್

ರಸ್ತೆ ಬದಿಯ ಮೋರಿಗೆ ಬೈಕ್  ಢಿಕ್ಕಿ  : ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

ಮಡಿಕೇರಿ: ಬೈಕೊಂದು ರಸ್ತೆ ಬದಿಯ ಮೋರಿಗೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಚೇರಿ ಬಳಿ ರವಿವಾರ ತಡರಾತ್ರಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ಮೈಸೂರು ಮೂಲದ ಯುವಕರಾದ ಪವನ್ ಹಾಗೂ ಮನೋಜ್ ಎಂದು ಗುರುತಿಸಲಾಗಿದೆ.

ಉಡುಪಿ : ಅಸ್ವಸ್ಥಗೊಂಡ ಯುವತಿ – ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ ಹಾಗೂ ನಿರ್ವಾಹಕ – vishwanews24

ಮೈಸೂರಿನಿಂದ ಧರ್ಮಸ್ಥಳಕ್ಕೆ ಬುಲೆಟ್ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಳೆದ ರಾತ್ರಿ ವೇಳೆ ಕೊಯ್ನಾಡಿನ ಫಾರೆಸ್ಟ್ ಐಬಿ ಬಳಿ ಮುಖ್ಯರಸ್ತೆಯಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯಲ್ಲಿದ್ದ ಮೋರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಸವಾರರಿಬ್ಬರು ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಆತ್ಮಹತ್ಯೆಗೆ ಶರಣಾದ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ – vishwanews24

Leave a Reply