ರಾಜಕೀಯಕ್ಕೆ ಎಂಟ್ರಿ ಕೊಟ್ಟ ಶಾಸಕ ರಮೇಶ್​ ಜಾರಕಿಹೊಳಿ ಪುತ್ರ ಅಮರ್ ಜಾರಕಿಹೊಳಿ -Vishwanews24

Featured, ರಾಜ್ಯ ನ್ಯೂಸ್

ಬೆಳಗಾವಿ:ಬೆಳಗಾವಿಯ ಕೆಎಂಎಫ್ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಮರ್ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದು, ಸಹೋದರ ಬಾಲಚಂದ್ರ ಜಾರಕಿಹೊಳಿ ನೆರವಿನಿಂದ ರಮೇಶ್ ಜಾರಕಿಹೊಳಿ, ಪುತ್ರನನ್ನು ರಾಜಕೀಯಕ್ಕೆ ಕರೆ ತಂದಿದ್ದಾರೆ.

ಗೋಕಾಕ್ ಸಾಹುಕಾರ ರೆಬೆಲ್ ಶಾಸಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪುತ್ರ ಅಮರ್ ಜಾರಕಿಹೊಳಿಯ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಜ್ಜಾಗುತ್ತಿದೆ.

ಬೆಳಗಾವಿ ಕೆಎಂಎಫಗೆ ಅಮರ್ ಜಾರಕಿಹೊಳಿ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಇದೇ ತಿಂಗಳ 28 ರಂದು ನಡೆಯಲಿರುವ ಕೆಎಂಎಫ ನಿರ್ದೇಶಕರ ಚುನಾವಣೆಯಲ್ಲಿ  ಒಟ್ಟು 14 ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದ್ದು, ಆದರೆ ಇದೀಗ  7 ಸ್ಥಾನಗಳು ನಿರ್ದೇಶಕ ಹುದ್ದೆಗೆ ಅವಿರೋಧ ಆಯ್ಕೆಯಾಗಿದ್ದಾರೆ.

ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಹಿಡಿತದಲ್ಲಿ ಇರುವ ಕೆಎಂಎಫ. ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಕೆಎಂಎಫ ಮತ್ತು ಡಿಸಿಸಿ ಬ್ಯಾಂಕ್ ಪ್ರಮುಖ ಪಾತ್ರವಹಿಸುತ್ತದೆ.  ಇನ್ನೂ ಚಿಕ್ಕಪ್ಪ ಬಾಲಚಂದ್ರ ಜಾರಕಿಹೊಳಿಯಿಂದ ಅಮರ್ ಕೆಎಂಎಫ ಎಂಟ್ರಿಯಾಗಿದ್ದಾರೆ.

ಏಪ್ರಿಲ್ 21ರಂದು ಏಳು ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಅಮರ್ ಜಾರಕಿಹೊಳಿ ಸೇರಿದಂತೆ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದ 7 ನಿರ್ದೇಶಕ ಸ್ಥಾನಗಳಿಗೆ ಏಪ್ರಿಲ್ 28ರಂದು ಚುನಾವಣೆ ನಡೆಯಲಿದೆ.