ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ – vishwanews24
ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ
ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ, ಈ ಬಗ್ಗೆ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ವರದಿಗಳು ಸುಳ್ಳು ಎಂದು ಹೇಳಿದ್ದಾರೆ.
ರಾಜೀನಾಮೆ ವಿಚಾರವಾಗಿ ಮುಖ್ಯಮಂತ್ರಿಯ ಕಚೇರಿಯಿಂದ ಯಾವುದೇ ಕರೆ ಬಂದಿಲ್ಲ. ಅಂತಹ ಯಾವುದೇ ಚರ್ಚೆಯೂ ಆಗಿಲ್ಲ. ಇದು ಯಾರೋ ಕಿಡಿಗೇಡಿಗಳ ಹಬ್ಬಿಸಿರುವ ವದಂತಿ ಎಂದು ನಾಗೇಂದ್ರ ಸ್ಪಷ್ಟನೆ ನೀಡಿದ್ದಾರೆ.
ನಮ್ಮ ಧರ್ಮದ ಬಗ್ಗೆ ನಾವೇ ತೀರ್ಮಾನಿಸುತ್ತೇವೆ : ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿಗೆ ಓವೈಸಿ ಆಕ್ರೋಶ – vishwanews24
ಮಂಗಳವಾರ ಮುಖ್ಯಮಂತ್ರಿ ಕರೆದಿದ್ದ ಜಿಲ್ಲಾ ಶಾಸಕರ ಸಭೆಗೆ ಕ್ಷೇತ್ರದಲ್ಲಿ ಪೂರ್ವ ನಿಗದಿಯಾಗಿದ್ದ ಪ್ರಮುಖ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭಾಗವಹಿಸಲು ಆಗಿರಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗೆ ಕರೆ ಮಾಡಿ ಮಾತನಾಡಿದ್ದೆ. ಇದನ್ನೇ ಅಪಾರ್ಥ ಮಾಡಿಕೊಂಡಿರುವ ಯಾರೋ ತನ್ನ ರಾಜೀನಾಮೆ ಬಗ್ಗೆ ವದಂತಿ ಹಬ್ಬಿಸಿದ್ದಾರೆ. ರಾಜೀನಾಮೆ ಬಗ್ಗೆ ಮಾಧ್ಯಮಗಳಲ್ಲೂ ಸುದ್ದಿ ಬಿತ್ತರವಾಗುತ್ತಿದ್ದು, ಅವೆಲ್ಲ ಸುದ್ದಿ ಸುಳ್ಳು ಎಂದು ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.
ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ : ಬೆಂಬಲ ಕೋರಿ ಸಿಎಂಗೆ ಪತ್ರ ಬರೆದ ಕ್ಯಾ.ಚೌಟ – vishwanews24
ವಾಲ್ಮೀಕಿ ನಿಗಮದಲ್ಲಿ ಭಾರೀ ಹಗರಣದ ಆರೋಪ ಹೊತ್ತಿರುವ ಸಚಿವ ನಾಗೇಂದ್ರರ ರಾಜೀನಾಮೆಗೆ ವಿರೋಧ ಪಕ್ಷಗಳು ಪ್ರಬಲವಾಗಿ ಒತ್ತಾಯಿಸುತ್ತಿವೆ.
