ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ : ಸಿಎಂ – vishwanews24
ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ : ಸಿಎಂ
ಚಾಮರಾಜನಗರ: ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಲೆ ಮಹದೇಶ್ವರ ಹೆಲಿಪ್ಯಾಡ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೆಲೆಸಿರುವ ವಿದೇಶಿಗಳ ಬಗ್ಗೆ ಕಣ್ಗಾವಲು ಇರಿಸಲು ಕೇಂದ್ರ ಗೃಹ ಸಚಿವರು ಸೂಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಉಗ್ರರು ಯಾವುದೇ ರಾಜ್ಯದಲ್ಲಿರಲಿ ಅವರನ್ನು ಮಟ್ಟಹಾಕಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.
ಉಡುಪಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ; ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡನೆ – vishwanews24
ಉಗ್ರರ ಚಟುವಟಿಕೆಗಳಿಗೆ ಅವಕಾಶ ಕೊಡಬಾರದು. ಪಹಲ್ಗಾಮ್ ಘಟನೆ ಅತ್ಯಂತ ಖಂಡನೀಯವಾದ ಹಾಗೂ ಅಮಾನುಷವಾದ ಘಟನೆ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಪುಲ್ವಾಮಾ ಘಟನೆಯೂ ಇದೇ ಜಿಲ್ಲೆಯಲ್ಲಿ ನಡೆದಿದ್ದರಿಂದ ಎಚ್ಚರಿಕೆಯಿಂದ ಇರಬೇಕಾಗಿತ್ತು. ಬಂದೋಬಸ್ತ್ ಸಡಿಲಗೊಳಿಸಬಾರದಿತ್ತು. ಇಲ್ಲಿ ಗುಪ್ತಚರ ವ್ಯವಸ್ಥೆಯ ವೈಫಲ್ಯವಾಗಿದೆ ಎಂದರು.
ಉಗ್ರರನ್ನು ಮಟ್ಟ ಹಾಕಲು ಎಲ್ಲ ಸಹಕಾರ:
ಘಟನೆ ನಡೆದ ಬಳಿಕ ಕ್ರಮ ತೆಗೆದುಕೊಳ್ಳುವುದು ಬೇರೆ. ಘಟನೆಯಾಗದಂತೆ ತೆಗೆದುಕೊಳ್ಳುವ ಕ್ರಮಗಳು ಬೇರೆ. ಅದನ್ನು ಕೇಂದ್ರ ಸರ್ಕಾರ ಮಾಡಬೇಕಿತ್ತು. ಪುಲ್ವಾಮಾ ದಾಳಿಯಲ್ಲಿ 40 ಸೈನಿಕರು ಪ್ರಾಣತೆತ್ತರು. ಈ ಘಟನೆಯಲ್ಲಿ 28 ಜನ ನಾಗರಿಕರು ಮೃತರಾಗಿದ್ದಾರೆ. ಇದನ್ನು ತಪ್ಪಿಸಲು ಕ್ರಮ ವಹಿಸಬೇಕಿತ್ತು. ಇಂಥ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು. ಉಗ್ರರು ಯಾವುದೇ ಧರ್ಮಕ್ಕೆ ಸೇರಿರಲಿ ಅವರೆಲ್ಲರನ್ನೂ ಮಟ್ಟ ಹಾಕಬೇಕಿರುವುದು ಸರ್ಕಾರದ ಜವಾಬ್ದಾರಿ. ಅದಕ್ಕೆ ಬೇಕಾಗಿರುವ ಎಲ್ಲಾ ಸಹಕಾರ, ಬೆಂಬಲವನ್ನು ನಾವು, ನಮ್ಮ ಸರ್ಕಾರ ಹಾಗೂ ಪಕ್ಷ ಕೊಡುತ್ತದೆ ಎಂದರು.
ಕೇಂದ್ರದ ಜೊತೆ ನಾವಿದ್ದೇವೆ, ಉಗ್ರ ಚಟುವಟಿಕೆಗಳು ಈ ದೇಶದಿಂದ ಹೋಗಬೇಕು : ಸಿಎಂ – vishwanews24
10 ಲಕ್ಷ ರೂ. ಪರಿಹಾರ:
ಉಗ್ರರ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಮೂವರು ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಪೊಲೀಸ್ ಗೌರವದಿಂದ ಅಂತ್ಯಕ್ರಿಯೆ ನಡೆಯಲಿದೆ ಎಂದರು.
