ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಿಸಲಾಗುವುದು: ಡಾ.ಜಿ.ಪರಮೇಶ್ವರ್‌ – Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಿಸಲಾಗುವುದು: ಡಾ.ಜಿ.ಪರಮೇಶ್ವರ್‌

ಬೆಂಗಳೂರು : “ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಿಸಲಾಗುವುದು” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಕಡಬದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಯುವಕನೋರ್ವ ಆಸಿಡ್ ದಾಳಿ ನಡೆಸಿದ ಪ್ರಕರಣ ಸಂಬಂಧ ಸಚಿವರು ಈ ಹೇಳಿಕೆ ನೀಡಿದ್ದು, “ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿರ್ಬಂಧ ಹೇರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಆ್ಯಸಿಡ್‌ ಸುಲಭದಲ್ಲಿ ಸಿಗುವುದರಿಂದ ಕೆಲವು ದುಷ್ಕರ್ಮಿಗಳು ಅವುಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಅದರ ಲಭ್ಯತೆ ಮತ್ತು ಖರೀದಿಯ ವಿಚಾರದಲ್ಲಿ ಕೆಲವೊಂದು ನಿರ್ಬಂಧ ಹೇರಬೇಕಾಗುತ್ತದೆ” ಎಂದು ಹೇಳಿದ್ದಾರೆ.

ರಾಮೇಶ್ವರಂ ಕೆಫೆ ಬ್ಲಾಸ್ಟ್‌ : ಬಾಂಬರ್‌ ರೇಖಾಚಿತ್ರ ಬಿಡುಗಡೆ – Vishwanews24

‘ಮಹಿಳೆಯರ ಮೇಲಿನ ದೌರ್ಜನ್ಯ’ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಲಹೆಗಳನ್ನು ಆಲಿಸಿ ಮಾತನಾಡಿದ ಅವರು‌, ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ. ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ, ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ ಸಮಸ್ಯೆಯನ್ನು ಹೇಳಿಕೊಳ್ಳಬಹುದು ಎಂದಿದ್ದಾರೆ.

ಪಣಂಬೂರು: ಸಮುದ್ರ ಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ – Vishwanews24

Leave a Reply