ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ : ಹೆಚ್.ಡಿ ಕುಮಾರಸ್ವಾಮಿ – Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ : ಹೆಚ್.ಡಿ ಕುಮಾರಸ್ವಾಮಿ

VISHWANEWS24 – ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿಯೇ ಎಲ್ಲಾ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡಲಾಗುತ್ತದೆ. ಆರೋಗ್ಯ ಕ್ಷೇತ್ರದಲ್ಲಿಯೂ ಮಹತ್ವದ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಿಸಲಾಗುತ್ತದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮದಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ರಾಜ್ಯದ ಜನರ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಈ ರಥಯಾತ್ರೆಯನ್ನು ಆರಂಭಿಸಿದ್ದೇವೆ. ಬದಲಾವಣೆ ತರಲು ಪ್ರಾಮಾಣಕ ಹೋರಾಟಕ್ಕೆ ಮುಂದಾಗಿದ್ದೇನೆ ಎಂದರು.

⏺️ ಪುತ್ತೂರಿನ ಹಿಂದೂ ಯುವತಿಯ ಮದುವೆಯಾದ ಬೆಂಗಳೂರಿನ ಮುಸ್ಲಿಂ ಯುವಕ..🔰 ಮತ್ತೊಂದು ವ್ಯವಸ್ಥಿತ ಲವ್ ಜಿಹಾದ್ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ..

ಕನಿಷ್ಠ 123 ಸ್ಥಾನಗಳಲ್ಲಿ ಗೆದ್ದು ಕನಸಿನ ರಾಮ ರಾಜ್ಯವನ್ನು ಸ್ಥಾಪಿಸುತ್ತೇನೆ. ಆರೋಗ್ಯ ಕ್ಷೇತ್ರದಲ್ಲಿ ಬದಲಾವಣೆ ತರಬೇಕೆಂಬ ಉದ್ದೇಶವನ್ನು ಇಟ್ಟುಕೊಂಡಿದ್ದೇನೆ. ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದರು.

ಶೈಕ್ಷಣಿಕ ಪ್ರಗತಿಯನ್ನು ರಾಜ್ಯದಲ್ಲಿ ಸಾಧಿಸೋ ಸಲುವಾಗಿ ಖಾಸಗಿ ಶಾಲೆಗಳಿಗಿಂತ ಉತ್ತಮ ಶಾಲೆಗಳನ್ನು ಸ್ಥಾಪನೆ ಮಾಡುವಂತ ಗುರಿಯನ್ನು ಹೊಂದಿದ್ದೇನೆ. ಸ್ತ್ರೀಶಕ್ತಿ ಸಂಘಗಳಿಗೆ ನೆರವಾಗೋ ನಿಟ್ಟಿನಲ್ಲಿ ನಮ್ಮ ಸರ್ಕಾರ ಬಂದರೇ 24 ಗಂಟೆಯಲ್ಲೇ ಸಾಲಮನ್ನಾ ಮಾಡಲಾಗುತ್ತದೆ ಎಂದು ಘೋಷಿಸಿದರು.

📛 ಚಿಕ್ಕಮಗಳೂರು : ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ..⏺️ ಫೋಟೋ , ವಿಡಿಯೋ ತೆಗೆದು ಬ್ಲಾಕ್ ಮೇಲ್..🚫 ಯುವಕ ಮೊಹಮದ್ ರೌಫ್ ವಿರುದ್ಧ ಯುವತಿ ದೂರು – Vishwanews24

Leave a Reply