ರಾಜ್ಯದಲ್ಲಿ ಬರ ಪರಿಸ್ಥಿತಿ : ಶೇ.50ರಷ್ಟು ಮೊತ್ತವನ್ನು ಮಧ್ಯಂತರ ಪರಿಹಾರವಾಗಿ ಬಿಡುಗಡೆ ಮಾಡಿ : ಮೋದಿಗೆ ಡಿಕೆಶಿ ಪತ್ರ – vishwanews24
ರಾಜ್ಯದಲ್ಲಿ ಬರ ಪರಿಸ್ಥಿತಿ : ಶೇ.50ರಷ್ಟು ಮೊತ್ತವನ್ನು ಮಧ್ಯಂತರ ಪರಿಹಾರವಾಗಿ ಬಿಡುಗಡೆ ಮಾಡಿ : ಮೋದಿಗೆ ಡಿಕೆಶಿ ಪತ್ರ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು ತುರ್ತಾಗಿ ಮಧ್ಯಂತರ ಪರಿಹಾರವನ್ನು ಬಿಡುಗಡೆ ಮಾಡಿ ಎಂದು ಸಿಎಂ ಡಿಕೆ ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ 76 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಒಟ್ಟು ಸಂಖ್ಯೆ 177ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ, ನಷ್ಟದ ಸಮಗ್ರ ಮೌಲ್ಯಮಾಪನ ಪೂರ್ಣಗೊಳ್ಳುವ ಮೊದಲೇ ತುರ್ತಾಗಿ ಮನವಿ ಮೊತ್ತದ ಶೇ.50 ರಷ್ಟು ಹಣವನ್ನು ಮಧ್ಯಂತರ ಪರಿಹಾರವಾಗಿ ಬಿಡುಗಡೆ ಮಾಡುವಂತೆ ಪತ್ರ ಬರೆದು ರಾಜ್ಯದಲ್ಲಿನ ತೀವ್ರ ಬರ ಪರಿಸ್ಥಿತಿಯ ಗಂಭೀರತೆಯನ್ನು ವಿವರಿಸಿದ್ದಾರೆ.
ರಾಜ್ಯ ಸರ್ಕಾರವು ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಮುಂದುವರಿಸಲು ನೆರವಾಗುವಂತೆ ರಾಜ್ಯ ವಿಪತ್ತು ಪರಿಹಾರ ನಿಧಿಯ (SDRF) ಎರಡನೇ ಕಂತಿನ ಕೇಂದ್ರ ಸರ್ಕಾರದ ಪಾಲನ್ನು ಮುಂಚಿತವಾಗಿಯೇ ಬಿಡುಗಡೆ ಮಾಡಬೇಕು ಎಂದು ಪತ್ರದಲ್ಲಿ ಪ್ರಧಾನಿಯವರನ್ನು ಸಿಎಂ ಒತ್ತಾಯಿಸಿದ್ದಾರೆ.
