ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ :  ಕರಾವಳಿ ಸೇರಿ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ  – vishwanews24

Featured, ಉಡುಪಿ, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ :  ಕರಾವಳಿ ಸೇರಿ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ 

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಅಬ್ಬರಿಸುತ್ತಿರುವ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ  ಬೆಂಗಳೂರಿಗೆ  ಇಂದು (ಬುಧವಾರ) ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಬುಧವಾರ, ಗುರುವಾರ ಎರಡು ದಿನ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದೇ ಕಾರಣಕ್ಕೆ ಇಂದು ನಗರದ ಪ್ರಾಥಮಿಕ, ಫ್ರೌಡಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಇತ್ತ ಮಳೆ ಹೆಚ್ಚಾಗಿದ್ದರ ಎಫೆಕ್ಟ್ ಐಟಿ ವಲಯಗಳಿಗೂ ತಟ್ಟಿದ್ದು, ಅಲರ್ಟ್ ಘೋಷಣೆ ಹಿನ್ನೆಲೆ ಹಲವು ಕಂಪನಿಗಳು ತಮ್ಮ ಸಿಬ್ಬಂದಿಗಳ ಹಿತ ದೃಷ್ಟಿಯಿಂದ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಿವೆ.

ಕಾಪು ಮೂರನೇ ಮಾರಿಗುಡಿ ರಜತ ಗದ್ದಿಗೆ ನಿರ್ಮಾಣದ ಪೂರ್ವಭಾವಿ ಗ್ರಾಮ‌ಸಭೆ : vishwanews24

ಇತ್ತ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಕೊಡಗು ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Leave a Reply