ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ- vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಬಿಡುವುಕೊಟ್ಟಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಈ ವಾರ ಪೂರ್ತಿ ಭಾರೀ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ಮಲೆನಾಡಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು (ಆ.4) ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆಯಿಂದ (ಜು.5) ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿ ಆ.7 ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಬೈಂದೂರು: ಸಮುದ್ರದ ಅಲೆಗಳ ಅಬ್ಬರಕ್ಕೆ ಮಗುಚಿದ ದೋಣಿ ; ಜೀವರಕ್ಷಿಸಿದ ಲೈಫ್ ಜಾಕೇಟ್ – vishwanews24

Leave a Reply