ರಾಜ್ಯದಲ್ಲಿ ಮತ್ತೆ 5 ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ! Vishwanews24
ರಾಜ್ಯದಲ್ಲಿ ಮತ್ತೆ 5 ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ! Vishwanews24
ಬೆಂಗಳೂರು ( Vishwanews24 ): ಮಳೆಗಾಲ ಆರಂಭವಾಗುವ ಮುನ್ನವೇ ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ 10ರವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 6ರಂದು ಮೈಸೂರು, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ, ಏಪ್ರಿಲ್ 7ರಂದು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಮೈಸೂರು, ಕೊಡಗು ಭಾಗದಲ್ಲಿ ಮಳೆಯಾಗಲಿದೆ. ಏಪ್ರಿಲ್ 8ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನದಲ್ಲಿ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಾಪು : ಖ್ಯಾತ ಸಾಹಿತಿ, ಬರಹಗಾರ್ತಿ ಮಮ್ತಾಜ್ ಬೇಗಂ ವಿಧಿವಶ -Vishwanews24
ಏಪ್ರಿಲ್ 9 ಮತ್ತು 10ರಂದು ದ.ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಕೊಡಗು, ರಾಯಚೂರು, ಹಾಸನ, ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
