ರಾಜ್ಯದಲ್ಲಿ ಸೆ. 9ರವರೆಗೂ ಮಳೆ : ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ -Vishwanews24

Featured, ಉಡುಪಿ, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ರಾಜ್ಯದಲ್ಲಿ ಸೆ. 9ರವರೆಗೂ ಮಳೆ : ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ -Vishwanews24

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಸುಮಾರು 1 ವಾರದಿಂದ ಭಾರೀ ಮಳೆಯಾಗುತ್ತಿದ್ದು, ಇನ್ನೂ 3 ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್‌, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಸೆ.8ರವರೆಗೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಕರ್ನಾಟಕ ಮಾತ್ರವಲ್ಲದೆ ಒರಿಶಾ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು, ವಿದರ್ಭ, ಛತ್ತೀಸ್​ಗಢದಲ್ಲೂ ಇಂದು ವಿಪರೀತ ಮಳೆಯಾಗುವ ನಿರೀಕ್ಷೆಯಿದೆ.