ರಾಜ್ಯದಲ್ಲಿ 2ನೇ ಹಂತದ ಅನ್ ಲಾಕ್ ಘೋಷಣೆ : ಪಾಸಿಟಿವಿಟಿ ರೇಟ್ ಕಡಿಮೆ ಇರುವ 16 ಜಿಲ್ಲೆಗಳಲ್ಲಿ ಸಡಿಲಿಕೆ –  Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ 2ನೇ ಹಂತದ ಅನ್ ಲಾಕ್ ಘೋಷಣೆ : ಪಾಸಿಟಿವಿಟಿ ರೇಟ್ ಕಡಿಮೆ ಇರುವ 16 ಜಿಲ್ಲೆಗಳಲ್ಲಿ ಸಡಿಲಿಕೆ –  Vishwanews24

ಬೆಂಗಳೂರು : ಕೋವಿಡ್ ಸೋoಕು ಇಳಿ ಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎರಡನೇ ಹಂತದ ಅನ್ ಲಾಕ್ ಘೋಷಣೆ ಮಾಡಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, ಶೇಕಡಾ 5 ರಷ್ಟು 16 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಇರುವ ಕಾರಣದಿಂದಾಗಿ, ಆ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಉಳಿದಂತೆ 13 ಜಿಲ್ಲೆಗಳಲ್ಲಿ ಸೋಂಕಿನ ಪ್ರಕರಣಗಳು ಕಡಿಮೆಯಾಗದ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಯಲಿದೆ. ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಸುದ್ದಿಗೋಷ್ಠಿಯ ಮುಖ್ಯಾಂಶಗಳು
• ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇ 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ.

• ಈ ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ.

• ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ.

• ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.

• ಎಸಿ. ಚಾಲನೆಗೊಳಿಸದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.

• ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.

• ಬಸ್ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.

• ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.

• ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.

• ಲಾಡ್ಜ್ ಗಳಲ್ಲಿ ಮತ್ತು ರೆಸಾರ್ಟ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.

• ಜಿಮ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.

• ಶೇ. 10 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು.

ರಾಜ್ಯವ್ಯಾಪಿ ಅನ್ವಯವಾಗುವಂತೆ:

• ಪ್ರತಿ ದಿನ ನೈಟ್ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.

• ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

• ಬಸ್ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.