ರಾಜ್ಯದ ಕೈಗಾರಿಕೆಗಳಲ್ಲಿ ಶೇ. 85ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು : ಸಚಿವ ಮುರುಗೇಶ್ ನಿರಾಣಿ – Vishwanews24

Featured, ರಾಜ್ಯ ನ್ಯೂಸ್

ರಾಜ್ಯದ 5 ವಲಯಗಳಲ್ಲಿ ಕೈಗಾರಿಕಾ ಟೌನ್‍ ಶಿಪ್‍ಗಳನ್ನು ಸ್ಥಾಪನೆ..

ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡದ ಕೈಗಾರಿಕೆಗಳಿಗೆ ಸಚಿವ ಮುರುಗೇಶ್ ನಿರಾಣಿ ಎಚ್ಚರಿಕೆ

ಬೆಂಗಳೂರು: ಹೊಸ ಕೈಗಾರಿಕಾ ನೀತಿ – 2020 – 25ರ ಅನ್ವಯ ರಿಯಾಯ್ತಿ ಹಾಗೂ ಉತ್ತೇಜನ ಪಡೆಯಲು ಕೈಗಾರಿಕಾ ಘಟಕಗಳು ಡಿ ವೃಂದದಲ್ಲಿ ಶೇ. 100 ರಷ್ಟು ಹಾಗೂ ಘಟಕದಲ್ಲಿ ಒಟ್ಟಾರೆ ಶೇ. 70 ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ವಿಧಾನ ಪರಿಷತ್ ನಲ್ಲಿ ಜೆಡಿಎಸ್‍ನ ಸಿ. ಎನ್. ಮಂಜೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೈಗಾರಿಕಾ ಟೌನ್‍ ಶಿಪ್‍ಗಳ ಬಳಿಯೇ ಜನವಸತಿ ಪ್ರದೇಶಗಳನ್ನು ನಿರ್ಮಾಣ ಮಾಡುವ ಮೂಲಕ ವಾಕ್ ಟು ವರ್ಕ್‍ಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಮಂಗಳೂರು: ಇಂದಿರಾ ಗಾಂಧಿಯಂತಹ ಅಪ್ರತಿಮ ಆಡಳಿತಗಾರ್ತಿ ಪ್ರಧಾನ ಮಂತ್ರಿ ಭಾರತದಲ್ಲಿ ಮತ್ತೊಬ್ಬರು ಬಂದಿಲ್ಲ: ಶಕುಂತಳಾ ಶೆಟ್ಟಿ – Vishwanews24

ಡಾ. ಸರೋಜಿನಿ ಮಹಿಷಿ ವರದಿಯನ್ವಯ ರಾಜ್ಯದ ಕೈಗಾರಿಕೆಗಳಲ್ಲಿ ಶೇ. 85ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು. ಇದರಲ್ಲಿ ಯಾವುದೇ ಲೋಪವಾಗಿದ್ದರೆ ಅಂತಹ ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.

ರಾಜ್ಯದ 5 ವಲಯಗಳಲ್ಲಿ ಕೈಗಾರಿಕಾ ಟೌನ್‍ ಶಿಪ್‍ಗಳನ್ನು ಸ್ಥಾಪನೆ ಮಾಡುವ ಮೂಲಕ ಕೈಗಾರಿಕೆಗಳನ್ನು ಎರಡನೇ ಹಂತದ ನಗರಗಳಿಗೂ ವಿಸ್ತರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.

‘ಅಪರೇಷನ್ ಗಂಗಾ’ದಲ್ಲಿ ಮಂಗಳೂರು ಮೂಲದ ಪೈಲಟ್ ಕ್ಯಾ. ಮೈಕಲ್ ಸಲ್ದಾನ್ಹ –  Vishwanews24

 

Leave a Reply