ರಾಜ್ಯಾದ್ಯಂತ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ – vishwanews24
ರಾಜ್ಯಾದ್ಯಂತ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ
ಬೆಂಗಳೂರು : ನಾಳೆಯಿಂದ ನವರಾತ್ರಿ ಶುರುವಾಗುತ್ತಿದೆ. ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಸದ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ ದಸರಾ ರಜೆ ಘೋಷಿಸಿದ್ದು ನಾಳೆಯಿಂದಲೇ ಮಕ್ಕಳಿಗೆ ದಸರಾ ರಜೆ ಆರಂಭವಾಗಲಿದೆ. ಒಟ್ಟು 17 ದಿನ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಇರಲಿದೆ.
2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆಗಳು ಆರಂಭವಾಗಲಿದೆ. ಇನ್ನು ದಸರಾ ರಜೆ ಬಳಿಕ ಅಕ್ಟೋಬರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.
ಆಹ್ವಾನ ನೀಡಿದರೆ ನಾನು ಮರಳಿ ಬಿಜೆಪಿ ಪಕ್ಷ ಸೇರ್ಪಡೆಗೆ ಸಿದ್ಧನಿದ್ದೇನೆ : ರಘುಪತಿ ಭಟ್ – vishwanews24
ಕರ್ನಾಟಕದಲ್ಲಿ 2024-25ರ ಶೈಕ್ಷಣಿಕ ವರ್ಷವು ಮೇ 29ರಿಂದ ಪ್ರಾರಂಭವಾಗಿದ್ದು, ಮೊದಲ ಅವಧಿಯು ಅಕ್ಟೋಬರ್ 2ರ ತನಕ ಇತ್ತು. ಸೆಪ್ಟೆಂಬರ್ 23ರಿಂದ ಮಧ್ಯಂತರ ಪರೀಕ್ಷೆಗಳು ಶುರುವಾಗಿ ಸೆಪ್ಟೆಂಬರ್ 30ರ ತನಕ ನಡೆದಿವೆ. ಆ ಬಳಿಕ ಸರ್ಕಾರಿ ಮತ್ತು ಖಾಸಗಿ ಶಾಲಾ ಮಕ್ಕಳಿಗೆ ದಸರಾ ರಜೆ ಪ್ರಕ್ರಿಯೆ ಶುರುವಾಗಿದೆ. ಅಕ್ಟೋಬರ್ 2ರಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಿದ ಮರು ದಿನದಿಂದ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದೆ. ಅಕ್ಟೋಬರ್ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.
