ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ
ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿದೆ.
ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಸೆಕ್ಷನ್ 30(2)(a) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ (ಮಾರಾಟ ನಿಷೇಧ ಮತ್ತು ನಿರ್ಬಂಧಗಳು) ನಿಯಮಾವಳಿಗಳು-2011 ರ ನಿಯಮ 2.3.4 ರ ಅಡಿಯಲ್ಲಿ ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಈ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ಇದನ್ನೂ ಓದಿ:
ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24
ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದ್ದು, ಅಧಿಸೂಚನೆ ಹೊರಡಿಸಿದ ದಿನಾಂಕದಿಂದಲೇ ಈ ನಿಷೇಧ ಜಾರಿಗೆ ಬಂದಿದೆ.
ತಂಬಾಕು ಅಥವಾ ನಿಕೋಟಿನ್ ಅಂಶವನ್ನು ಪ್ರತ್ಯೇಕವಾಗಿ ಪ್ಯಾಕ್ ಮಾಡಿ, ನಂತರ ಗ್ರಾಹಕರು ಸುಲಭವಾಗಿ ಮಿಶ್ರಣ ಮಾಡಿ ಬಳಸುವಂತೆ ಮಾರಾಟ ಮಾಡುವ ಯಾವುದೇ ಉತ್ಪನ್ನಗಳಿಗೂ ಈ ನಿಷೇಧ ಅನ್ವಯವಾಗಲಿದೆ.
ಇದನ್ನೂ ಓದಿ:
ಪ್ಯಾಕೆಟ್, ಸ್ಯಾಚೆಟ್ ಅಥವಾ ಯಾವುದೇ ಹೆಸರಿನಲ್ಲಿ ತಂಬಾಕು ಮತ್ತು ನಿಕೋಟಿನ್ ಮಿಶ್ರಿತ ಗುಟ್ಕಾ ಹಾಗೂ ಪಾನ್ ಮಸಾಲಾಗಳನ್ನು ರಾಜ್ಯದಾದ್ಯಂತ ಮಾರಾಟ ಮಾಡುವುದು ಸಂಪೂರ್ಣವಾಗಿ ಶಿಕ್ಷಾರ್ಹ ಅಪರಾಧವಾಗಿದೆ.
