ರಾಜ್ಯ ಕಾಂಗ್ರೆಸ್ ಸರ್ಕಾರ ಆದಷ್ಟು ಬೇಗ ಮನೆಗೆ ಹೋಗಲಿದೆ , ಬಿಜೆಪಿಗೆ ಜನಾಶ್ರೀರ್ವಾದ ಸಿಗಲಿದೆ : ಬಿ.ವೈ. ವಿಜಯೇಂದ್ರ – vishwanews24
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ ..
ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮುಂದಿನ ಒಂದೂವರೆ ವರ್ಷಗಳ ಕಾಲ ಮುಂದುವರಿಯಲಿದೆ : ಬಿ.ವೈ. ವಿಜಯೇಂದ್ರ
ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರ ಆದಷ್ಟು ಬೇಗ ಮನೆಗೆ ಹೋಗಲಿದೆ. ಅದನ್ನು ಜನರೇ ತೀರ್ಮಾನಿಸಿದ್ದಾರೆ. ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಭ್ರಷ್ಟ, ಜನವಿರೋಧಿ ಸರ್ಕಾರದ ವಿರುದ್ಧ ನಮ್ಮ ಯುದ್ಧ ಆರಂಭವಾಗಿದೆ. ರಣರಂಗದಲ್ಲಿ ಬಿಜೆಪಿ ಒಂದು ಅಪೂರ್ವವಾದ ಜಯ ಸಾಧಿಸಲಿದೆ. ನಮ್ಮ ಗೆಲುವು ತಡೆಯಲು ಡಿಕೆ, ಬಿಕೆ ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿಗೆ ಜನಾಶ್ರೀರ್ವಾದ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ.
ನಗರದ ಶ್ರೀ ಕನಕದುರ್ಗ ದೇವಿಗೆ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಹತ್ತು ದಿನಗಳ ಕಾಲದಿಂದ ಹಮ್ಮಿಕೊಂಡಿದ್ದ ಐತಿಹಾಸಿಕ ಬಳ್ಳಾರಿ ಚಲೋ ಪಾದಯಾತ್ರೆ ಇಂದು ಮುಕ್ತಾಯವಾಗುತ್ತಿದೆ. ಪಾದಯಾತ್ರೆ ಮಾತ್ರವೇ ಮುಕ್ತಾಯವಾಗಿದ್ದು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮತ್ತೆ ಆರಂಭವಾಗಲಿದೆ. ಮುಂದಿನ ಒಂದೂವರೆ ವರ್ಷಗಳ ಕಾಲ ಇದು ಮುಂದುವರಿಯಲಿದೆ ಎಂದು ಹೇಳಿದರು.
ಇದನ್ನೂ ಓದಿ :
ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ : ಸಿದ್ದರಾಮಯ್ಯ – vishwanews24
ಇಂದು ಸಂಜೆ ನಾಲ್ಕು ಗಂಟೆಗೆ ಮುನ್ಸಿಪಲ್ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಇದಕ್ಕೆ ಭಾರಿ ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ. ಇಲ್ಲಿಗೆ ಮೊದಲ ಹಂತರ ಹೋರಾಟ ಮುಕ್ತಾಯವಾಗಲಿದೆ ಎಂದರು.
ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಜನ ಈಗಾಗಲೇ ದಿಕ್ಕರಿಸುವ ಮನಸ್ಥಿತಿಗೆ ಬಂದಿದ್ದಾರೆ. ಈ ಸರ್ಕಾರದಿಂದ ಯಾವುದೇ ಪ್ರಯೋಜನ ಇಲ್ಲ ಎಂಬುದು ಅವರಿಗೆ ಮನವರಿಕೆಯಾಗಿದೆ. ನಾಡಿನ ಬಡವರು, ದೀನದಲಿತರು, ಮಹಿಳೆಯರು, ಕೂಲಿ ಕಾರ್ಮಿಕರಿಗೆ ಯಾವುದೇ ಅನುಕೂಲವನ್ನು ಈ ಸರ್ಕಾರ ಮಾಡಿಲ್ಲ. ನಾನು ಶೇ 90 ಉದ್ಯಮ, ಶೇ 10 ರಷ್ಟು ರಾಜಕಾರಣಿ ಎಂದು ಸಿಎಂ ಹೇಳಿದ್ದಾರೆ. ಅವರ ಮಾತಲ್ಲೇ ಎಲ್ಲ ಅಡಗಿದೆ. ಡಿ.ಕೆ.ಶಿವಕುಮಾರ್ ಅವರಿಗೆ ರಿಯಲ್ ಎಸ್ಟೇಟ್ ವ್ಯವಹಾರ ಮುಖ್ಯವಾಗಿದೆ. ಇಂತಹವರಿಂದ ರಾಜ್ಯದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವಿಲ್ಲ. ವಿಶೇಷವಾಗಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳಿಗೆ ಈ ಸರ್ಕಾರ ಉತ್ತರ ನೀಡಿಲ್ಲ ಎಂದರು.
ಇದನ್ನೂ ಓದಿ :
ಕರ್ನಾಟಕದ ಗ್ಯಾರಂಟಿ ಮಾಡೆಲ್ ದೇಶದ ಎಲ್ಲೆಲ್ಲೂ ಇದೆ : ಸಿಎಂ ಡಿಕೆ ಶಿ – vishwanews24
