ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

Featured, ರಾಷ್ಟ್ರ ನ್ಯೂಸ್

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು (ಜೂ.10) ವಿಧಿವಶರಾಗಿದ್ದಾರೆ.

ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತಿರಾಜ ಅವರು ಇಂದು ತಮ್ಮ 84ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ದಶಕಗಳ ಕಾಲ ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು, ತಮ್ಮ ವಿಶಿಷ್ಟ ಕಥಾಹಂದರ ಹಾಗೂ ಗ್ರಾಮೀಣ ಸೊಗಡಿನ ಚಿತ್ರಗಳ ಮೂಲಕ ದಕ್ಷಿಣ ಭಾರತದ ಸಿನಿಮಾ ರಂಗಕ್ಕೆ ವಿಭಿನ್ನ ರೂಪವನ್ನು ನೀಡಿದ್ದರು. ತಮ್ಮ ಸುದೀರ್ಘ ಮತ್ತು ಅದ್ಭುತ ಚಲನಚಿತ್ರ ಜೀವನದಲ್ಲಿ ಭಾರತಿರಾಜ ಅವರು ಕೇವಲ ನಿರ್ದೇಶನ ಮಾತ್ರವಲ್ಲದೆ, ಕಥೆಗಾರರಾಗಿ ಮತ್ತು ನಟರಾಗಿಯೂ ಗುರುತಿಸಿಕೊಂಡಿದ್ದರು.

Leave a Reply