ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ನೇಣು ಬಿಗಿದು ಕೊಂಡು ಆತ್ಮಹತ್ಯೆ – vishwanews24
4ವರ್ಷ ಪ್ರೀತಿಸಿ ಮದುವೆಯಾಗಿ ಮೂರೇ ದಿನಕ್ಕೆ ತಾಯಿ ಮನೆ ಸೇರಿದ ಹೆಂಡತಿ – ಮನನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು
ಆತ್ಮಹತ್ಯೆ ಮಾಡಿಕೊಂಡ ಯುವಕ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ವಿನೋದ್
ಚಿಕ್ಕಮಗಳೂರು : ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ವಿನೋದ್(24) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಮಗಳೂರು ನಗರದ ಹೊರವಲಯದ ತೇಗೂರು ಗ್ರಾಮದ ಮನೆಯಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿನೋದ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ಹೆಂಡತಿ ಬಿಟ್ಟು ಹೋದಳೆಂದು ಮನನೊಂದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ವಿನೋದ್ ಮನೆಯಲ್ಲಿ ಯಾರು ಇಲ್ಲದ ವೇಳೆ ಸಮಯ ನೋಡಿಕೊಂಡು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ತೇಗೂರು ಗ್ರಾಮದ ತನುಜಾ ಎಂಬ ಯುವತಿ ಹಾಗೂ ವಿನೋದ್ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಯುವತಿ ಮನೆಯವರ ಸಮ್ಮತಿ ಇರಲಿಲ್ಲ. ಹೀಗಾಗಿ ಯುವತಿ ಮನೆಯವರ ವಿರೋಧದ ನಡುವೆಯೇ ಇಬ್ಬರೂ ಓಡಿ ಹೋಗಿ ಮದುವೆಯಾಗಿದ್ದರು. ಡಿಸೆಂಬರ್ 10 ರಂದು ವಿನೋದ್ ಹಾಘೂ ತನುಜಾ ಮದುವೆಯಾಗಿದ್ದರು. ಇನ್ನೇನು ಪರಸ್ಪರ ಪ್ರೀತಿ ಮಾಡಿದ್ದ ಜೋಡಿ ಹಕ್ಕಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸಂಸಾರ ಶುರು ಮಾಡುವ ಹೊತ್ತಲ್ಲೇ ಪೊಲೀಸರು ನವ ಜೋಡಿಯನ್ನು ಠಾಣೆಗೆ ಕರೆ ತಂದಿದ್ದರು. ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ ಠಾಣೆಯಲ್ಲಿ ಪಂಚಾಯಿತಿ ನಡೆದಿದ್ದು ಯುವತಿ ತನ್ನ ತಾಯಿ ಮನೆಗೆ ಹೋಗುವುದಾಗಿ ಹೇಳಿಕೆ ನೀಡಿದ್ದಾಳೆ. ಮದುವೆಯಾದ ಮೂರೇ ದಿನಕ್ಕೆ ಗಂಡನನ್ನು ಬಿಟ್ಟು ತಾಯಿ ಜೊತೆ ಹೋಗುವುದಾಗಿ ಹೇಳಿ ಯುವತಿ ಉಲ್ಟಾ ಹೊಡೆದಿದ್ದಾಳೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕೇಂದ್ರ ಸರ್ಕಾರದ ಅನುದಾನ ತಾರತಮ್ಯ: ನಾಳೆ ದೆಹಲಿಯಲ್ಲಿ ರಾಜ್ಯ ಸರ್ಕಾರ ಪ್ರತಿಭಟನೆ – vishwanews24
ಮನ ನೊಂದ ವಿನೋದ್ ಫೆಬ್ರವರಿ 2 ರಂದು ಆತ್ಮಹತ್ಯೆಗೆ ಯತ್ನಿಸಿದ್ದ ನೇಣು ಹಾಕಿಕೊಂಡಿದ್ದ ವಿನೋದ್ ರಕ್ಷಿಸಿ ಕುಟುಂಬಸ್ಥರು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ನಿನ್ನೆ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ವಿನೋದ್ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
