ರಾಹುಲ್ ಗಾಂಧಿ ರಾಜೀನಾಮೆ ನಿರ್ಧಾರ : ಇಂತಹ ನಿರ್ಧಾರ ತೆಗೆದುಕೊಳ್ಳುವ ಧೈರ್ಯ ಕೆಲವರಿಗೆ ಮಾತ್ರ ಇರುತ್ತದೆ : ಪ್ರಿಯಾಂಕಾ ಗಾಂಧಿ -Vishwanews24
ನವದೆಹಲಿ: ಲೋಕಸಭೆ ಚುನಾವಣೆ ಹೀನಾಯ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷಗಾದಿ ತೊರೆಯಲು ನಿರ್ಧರಿಸಿದ್ದ ರಾಹುಲ್ ಗಾಂಧಿ ಕೊನೆಗೂ ಯಾರ ಮನವೊಲಿಕೆಗೂ ಬಗ್ಗದೆ ರಾಜೀನಾಮೆ ನೀಡಿದ್ದಾರೆ. ರಾಹುಲ್ರ ಈ ನಿರ್ಧಾರವನ್ನು ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಬಲಿಸಿದ್ದು, ಇಂತಹ ನಿರ್ಧಾರ ತೆಗೆದುಕೊಳ್ಳುವ ಧೈರ್ಯ ಕೆಲವರಿಗೆ ಮಾತ್ರ ಇರುತ್ತದೆ ಎಂದು ತಿಳಿಸಿದ್ದಾರೆ.
ರಾಹುಲ್ ಗಾಂಧಿ ರಾಜೀನಾಮೆ ಕುರಿತು ಗುರುವಾರ ಬೆಳಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ, ರಾಹುಲ್ ಗಾಂಧಿ ರಾಜೀನಾಮೆ ಪತ್ರದ ಟ್ವೀಟ್ ಅನ್ನು ರೀಟ್ವೀಟ್ ಮಾಡಿ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವ ಧೈರ್ಯ ತೋರಿರುವ ರಾಹುಲ್ ಗಾಂಧಿ ಬಗ್ಗೆ ಗೌರವವಿದೆ ಎಂದು ತಿಳಿಸಿದ್ದಾರೆ.
Few have the courage that you do @rahulgandhi. Deepest respect for your decision. https://t.co/dh5JMSB63P
— Priyanka Gandhi Vadra (@priyankagandhi) July 4, 2019
ರಾಜೀನಾಮೆ ನಿರ್ಧಾರದ ಜತೆಗೆ ರಾಹುಲ್ ನಾಲ್ಕು ಪುಟಗಳ ವಿದಾಯ ಪತ್ರವನ್ನೂ ಟ್ವಿಟ್ಟರ್ನಲ್ಲಿ ಪ್ರಕಟಿಸಿದ್ದಾರೆ. ಪತ್ರದ ಮೊದಲ ಪುಟದಲ್ಲಿ ಸೋಲಿನ ಆತ್ಮಾವಲೋಕನದ ಬಗ್ಗೆ ಉಲ್ಲೇಖವಿದ್ದರೆ, ಮುಂದಿನ 3 ಪುಟಗಳಲ್ಲಿ ಬಿಜೆಪಿ, ಆರ್ಎಸ್ಎಸ್ ಮೋದಿಮಯವಾಗಿವೆ. ಚುನಾವಣೆ ಸೋಲಿಗೆ ಆಡಳಿತಾರೂಢ ಪಕ್ಷದ ಸರ್ವಾಧಿಕಾರ ಧೋರಣೆಯೇ ಕಾರಣ ಎಂದು ಕಿಡಿಕಾರಿದ್ದರು.
