ರಾಹುಲ್ ಗಾಂಧಿ ED ವಿಚಾರಣೆ ವಿರೋಧಿಸಿ  ಜೂ. 21ರಂದು ಉಡುಪಿ ಬ್ಲಾಕ್ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ – Vishwanews24

Featured, ಉಡುಪಿ

ರಾಹುಲ್ ಗಾಂಧಿ ED ವಿಚಾರಣೆ ವಿರೋಧಿಸಿ  ಜೂ. 21ರಂದು ಉಡುಪಿ ಬ್ಲಾಕ್ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ

ಉಡುಪಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರ ವಿರುದ್ಧ ಸುಳ್ಳು ಪ್ರಕರಣ ಸೃಷ್ಟಿಸಿ ಜಾರಿ ನಿರ್ದೇಶನಾಲಯ (ED) ಸಂಸ್ಥೆಯ ತನಿಖೆ ಹೆಸರಲ್ಲಿ ದುರ್ಬಳಕೆ ಹಾಗೂ ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತಾ. 21.6.2022ರ ಮಂಗಳವಾರದಂದು ಸಂಜೆ 4.00 ಘಂಟೆಗೆ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಎದುರು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ.

ಈ ಬೃಹತ್ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ವಿನಂತಿಸಿದ್ದಾರೆ.

ಬೆಂಗಳೂರು: ಭಾರತೀಯ ವಿಜ್ಞಾನ ಭವನದಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದ ಮೋದಿ – Vishwanews24

Leave a Reply