ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಎ14 ಪ್ರದೋಷ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು 59ನೇ ಸಿಸಿಹೆಚ್ ಕೋರ್ಟ್ ಪುರಸ್ಕರಿಸಿದೆ.
ಪ್ರಕರಣದ 14ನೇ ಆರೋಪಿ ಪ್ರದೋಷ್ ತನ್ನನ್ನ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ವಿಚಾರಣೆ ನಡೆಸಿದ ಕೋರ್ಟ್ ಮಾಫಿಸಾಕ್ಷಿಯನ್ನ ಪರಿಗಣಿಸಿದೆ.
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24
ತಮ್ಮ ಗಮನದಲ್ಲಿರುವ ಸತ್ಯವಾದ ಅಂಶಗಳನ್ನ ಬಹಿರಂಗಪಡಿಸಬೇಕು. ಸತ್ಯ ಮುಚ್ಚಿಟ್ಟರೇ ಮಾಫಿ ಸಾಕ್ಷಿಯಿಂದ ಆರೋಪಿಯನ್ನಾಗಿಸಲಾಗುವುದು ಎಂದು ನ್ಯಾಯಾಲಯ ಆರೋಪಿ ಪ್ರದೋಷ್ ಗೆ ಎಚ್ಚರಿಕೆ ನೀಡಿದೆ. ಆದೇಶ ಪ್ರತಿಯನ್ನು ಜೈಲು ಅಧಿಕಾರಿಗಳ ಮೂಲಕ ಪ್ರದೋಷ್ ಗೆ ರವಾನೆ ಮಾಡಲಾಗುತ್ತಿದೆ ಎನ್ನಲಾಗಿದೆ.
