ರೇಣುಕಾ ಸ್ವಾಮಿ ಪ್ರಕರಣ: ದರ್ಶನ್‌, ಪವಿತ್ರಾ ಸೇರಿ 7 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು – vishwanews24

Featured, ರಾಜ್ಯ ನ್ಯೂಸ್

ರೇಣುಕಾ ಸ್ವಾಮಿ ಪ್ರಕರಣ: ದರ್ಶನ್‌, ಪವಿತ್ರಾ ಸೇರಿ 7 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್​ರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜುಲೈ 11 ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್​ನಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ. ಈಗ ಅವರಿಗೆ ಜಾಮೀನು ಮಂಜೂರಾಗಿದ್ದು, ತಾತ್ಕಾಲಿಕ ನಿರಾಳತೆ ದೊರಕಿದೆ.

ಕುಂದಾಪುರ: ಗಂಗೊಳ್ಳಿ ಗ್ರಾ. ಪಂ. ಕಾಂಗ್ರೆಸ್ ತೆಕ್ಕೆಗೆ  – vishwanews24

ದರ್ಶನ್ ಪರ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರು, ದರ್ಶನ್ ಅವರದ್ದು ರೇಣುಕಾ ಸ್ವಾಮಿ ಕೊಲೆಯಲ್ಲಿ ಪಾತ್ರವಿಲ್ಲ ಎಂದು ವಾದಿಸಿದ್ದರು. ಪೊಲೀಸರು ಕೆಲವು ಉತ್ಪ್ರೇಕ್ಷಿತ ಆರೋಪಗಳನ್ನು ದರ್ಶನ್ ವಿರುದ್ಧ ಮಾಡಿದ್ದಾರೆ ಎಂದು ವಾದಿಸಿದ್ದರು. ದರ್ಶನ್ ಪರ ವಕೀಲರ ವಾದವನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರು ದರ್ಶನ್​ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ಕಾಪು : ಲೀಲಾಧರ ಶೆಟ್ಟಿಯವರು ನಮ್ಮನ್ನು ಆಗಲಿ ವರ್ಷವಾದರೂ ಅವರು ಮಾಡಿದ ಸಮಾಜ ಸೇವೆ ನಿತ್ಯ ನಿರಂತರ : ಮನೋಹರ ಎಸ್ ಶೆಟ್ಟಿ – vishwanews24

Leave a Reply