ರೈತರ ಗಮನಕ್ಕೆ : ಕಿಸಾನ್ ಸಮ್ಮಾನ್ ನಿಧಿಯ ಪರಿಹಾರಕ್ಕಾಗಿ ಆ. 15 ರೊಳಗೆ ಇ-ಕೆವೈಸಿ ಕಡ್ಡಾಯ – Vishwanews24

Featured, ದಕ್ಷಿಣ ಕನ್ನಡ

ರೈತರ ಗಮನಕ್ಕೆ : ಕಿಸಾನ್ ಸಮ್ಮಾನ್ ನಿಧಿಯ ಪರಿಹಾರಕ್ಕಾಗಿ ಆ. 15 ರೊಳಗೆ ಇ-ಕೆವೈಸಿ ಕಡ್ಡಾಯ

ಮಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕರ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾ http://pmkisan.gov.in ಪೋರ್ಟಲ್‌ನ ಫಾರ್ಮರ್ಸ್ ಕೋರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ದಾಖಲಿಸಿ ಆ.15ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕಾಗಿದೆ.

ಒಂದು ವೇಳೆ ಇ-ಕೆವೈಸಿ ಮಾಡಿಸದಿದ್ದಲ್ಲಿ ರೈತರ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಪ್ರಮುಖ ಆರೋಪಿಗಳ ಬಂಧನ ..

Leave a Reply