ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ : ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತ್ಯು – vishwanews24
ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ : ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತ್ಯು
ಅರಂತೋಡು: ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಇದೀಗ ಸಂಭವಿಸಿದ ಘಟನೆ ಶುಕ್ರವಾರ(ಜು.25) ವರದಿಯಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
