ಲಾರಿ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ: ಮಗು ಸೇರಿ 13 ಜನ ಮೃತ್ಯು – Vishwanews24

Featured, ರಾಜ್ಯ ನ್ಯೂಸ್

ಚಿಕ್ಕಬಳ್ಳಾಪುರ: ಲಾರಿ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ: ಮಗು ಸೇರಿ 13 ಜನ ಮೃತ್ಯು

ಚಿಕ್ಕಬಳ್ಳಾಪುರ: ಸಿಮೆಂಟ್ ಬಲ್ಕರ್ ಲಾರಿ ಹಾಗೂ ಟಾಟಾ ಸುಮೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 13 ಮಂದಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿಯ ಸಂಚಾರ ಠಾಣೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ 7ರ ಸುಮಾರಿನಲ್ಲಿ ಸಂಭವಿಸಿದೆ.

ಪಂಚರ್ ಆಗಿ ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ, ಟಾಟಾ ಸುಮೋ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ನಾಲ್ವರು ಮಹಿಳೆಯರು ಒಂದು ಗಂಡು ಮಗು ಹಾಗೂ ಎಂಟು ಮಂದಿ ಪುರುಷರು ಮೃತಪಟ್ಟವರಾಗಿದ್ದಾರೆ.

ಮೃತಪಟ್ಟವರು ಆಂದ್ರದ ಅನಂತಪುರ ಜಿಲ್ಲೆಯ ಗೋರಂಟ್ಲ ವ್ಯಾಪ್ತಿಗೆ ಸೇರಿದ ಕೊತ್ತಚೆರುವು ಸೇರಿದವರಾಗಿದ್ದು ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ.

ಅ. 28ರಂದು ಚಂದ್ರಗ್ರಹಣ: ಕುಕ್ಕೆ, ಸುಬ್ರಹ್ಮಣ್ಯ ,  ಕಟೀಲಿನಲ್ಲಿ ದೇವರ ದರ್ಶನದ ಸಮಯ ಬದಲು – Vishwanews24

Leave a Reply