ಲೋಕಸಭಾ ಚುನಾವಣೆ: ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ – Vishwanews24
ಲೋಕಸಭಾ ಚುನಾವಣೆ: ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ
ವಯನಾಡು: ಲೋಕಸಭಾ ಚುನಾವಣೆಗೆ ಕೇರಳದ ವಯನಾಡಿನಿಂದ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸ್ಪರ್ಧಿಸಲಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ.
ರಾಹುಲ್ ಗಾಂಧಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಸಹೋದರಿ ಪ್ರಿಯಾಂಕಾ ಗಾಂಧಿಯವರೊಂದಿಗೆ ರೋಡ್ ಶೋ ನಡೆಸಿದರು. ಬಳಿಕ ನಡೆದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಉಡುಪಿ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ – Vishwanews24
ಇನ್ನು ರಾಹುಲ್ ಗಾಂಧಿಯವರು ಎರಡನೇ ಬಾರಿಗೆ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ವಯನಾಡ್ ಕ್ಷೇತ್ರದಿಂದ 10,92,197 ಮತಗಳ ಪೈಕಿ 7,06,367 ಮತಗಳನ್ನು ಪಡೆದು ವಿಜಯ ಸಾಧಿಸಿದ್ದರು.
