ಲೋಕಸಭಾ ಚುನಾವಣೆ : ಸ್ವತಂತ್ರ ಅಭ್ಯರ್ಥಿ `ಪ್ರಕಾಶ್ ರೈ’ ಇಂದು ನಾಮಪತ್ರ ಸಲ್ಲಿಕೆ – Vishwanews24
ಬೆಂಗಳೂರು : ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿರು ಬಹುಭಾಷಾ ನಟ ಪ್ರಕಾಶ್ ರೈ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಇಂದು ತಮ್ಮ ಬೆಂಬಲಿಗರ ಜೊತೆ ಬಿಬಿಎಂಪಿ ಕೇಂದ್ರ ಕಚೇರಿಗೆ ತೆರಳಿ ಪ್ರಕಾಶ್ ರೈ ನಾಮಪತ್ರ ಸಲ್ಲಿಸಿ, ಪ್ರಚಾರವನ್ನು ಮತ್ತಷ್ಟು ಚುರುಕುಗೊಳಿಸಲಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಕಾಶ್ ರೈ, ಇಂದು ಬೆಳಗ್ಗೆ 9 ಗಂಟೆಗೆ ಸರಿಯಾಗಿ ಅಸ್ಟಿನ್ ಟೌನ್ ನಲ್ಲಿರುವ ನಂದ ಕ್ರೀಡಾಂಗಣದಿಂದ ಮೆರವಣಿಗೆ ಮಾಡಲಾಗುತ್ತದೆ. ಮೆರವಣಿಗೆ ಮೂಲಕ ಬಿಬಿಎಂಪಿ ಕೇಂದ್ರ ಕಚೇರಿವರೆಗೆ ಸಾಗಿ ನಂತರ ನಾಮಪತ್ರ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
