ವರದಕ್ಷಿಣೆ ಕಿರುಕುಳ:  ನವವಿವಾಹಿತೆ ಆತ್ಮಹತ್ಯೆ – vishwanews24

Featured, ರಾಷ್ಟ್ರ ನ್ಯೂಸ್

800 ಗ್ರಾಂ ಚಿನ್ನ, 70 ಲಕ್ಷದ ಕಾರು ನೀಡಿದರೂ ವರದಕ್ಷಿಣೆ ಕಿರುಕುಳ 

ಚೆನ್ನೈ : 800 ಗ್ರಾಂ ಚಿನ್ನ, 70 ಲಕ್ಷ ರೂ. ಮೌಲ್ಯದ ಕಾರು ನೀಡಿದ ಬಳಿಕವೂ ವರದಕ್ಷಿಣೆಗಾಗಿ ಪತಿಯ ಮನೆಯವರು ನೀಡುತ್ತಿದ್ದ ಕಿರುಕುಳ ತಾಳಲಾಗದೇ ನವವಿವಾಹಿತೆ ಆತ್ಮಹತ್ಯೆ ಶರಣಾಗಿರುವ ಘಟನೆ ತಮಿಳುನಾಡಿನ ತಿರುಪ್ಪೂರಿನಲ್ಲಿ ನಡೆದಿದೆ.

ರಿಧನ್ಯಾ(27) ವರದಕ್ಷಿಣೆ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಏಪ್ರಿಲ್‌ನಲ್ಲಿ ಕವಿನ್ ಕುಮಾರ್(28) ಎಂಬುವವರನ್ನು ರಿಧನ್ಯಾ ವಿವಾಹವಾಗಿದ್ದರು. ಮದುವೆಯಲ್ಲಿ ೮೦೦ ಗ್ರಾಂ ಚಿನ್ನಾಭರಣ ಮತ್ತು 70 ಲಕ್ಷ ರೂ. ಮೌಲ್ಯದ ವೋಲ್ವೋ ಕಾರನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು.

ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಪಟ್ಟಿ ಬಿಡುಗಡೆ – vishwanews24

ಭಾನುವಾರದಂದು ರಿಧನ್ಯಾ ಮೊಂಡಿಪಾಳ್ಯಂದಲ್ಲಿರುವ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತಿಳಿಸಿ, ಮನೆಯಿಂದ ಹೊರಟಿದ್ದರು. ಬಳಿಕ ದಾರಿ ಮಧ್ಯೆ ಕಾರು ನಿಲ್ಲಿಸಿ, ಕೀಟನಾಶ ಸೇವಿಸಿದ್ದಾರೆ. ಬಹಳ ಹೊತ್ತಿನಿಂದ ಈ ಪ್ರದೇಶದಲ್ಲಿ ಕಾರು ನಿಂತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದಾಗ ಆಕೆಯ ಶವ ಪತ್ತೆಯಾಗಿದೆ. ಜೊತೆಗೆ ಬಾಯಿಯಲ್ಲಿ ನೊರೆ ಬಂದಿರುವುದನ್ನು ಕಂಡು ಮೃತಪಟ್ಟಿರುವುದಾಗಿ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉಡುಪಿ: ಗೋವಿನ ರುಂಡ ಪತ್ತೆ ಪ್ರಕರಣ : ದುಷ್ಕರ್ಮಿಗಳನ್ನು 24 ಗಂಟೆಯೊಳಗೆ ಬಂಧಿಸುವಂತೆ ಯಶ್ಪಾಲ್ ಆಗ್ರಹ – vishwanews24

 

ಸದ್ಯ ರಿಧನ್ಯಾಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆಕೆಯ ಪತಿ ಕವಿನ್ ಕುಮಾರ್, ಮಾವ ಈಶ್ವರಮೂರ್ತಿ ಮತ್ತು ಅತ್ತೆ ಚಿತ್ರಾದೇವಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

Leave a Reply