ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ  – vishwanews24

Featured, ರಾಷ್ಟ್ರ ನ್ಯೂಸ್

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ 

ನವದೆಹಲಿ : ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದ ಜನರಿಗೆ ಕೇಂದ್ರ ಸರ್ಕಾರ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 42 ರೂ. ಹೆಚ್ಚಳವಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ.

ದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ ಬಳಕೆ ಸಿಲಿಂಡರ್ ದರ 42 ರೂ. ಹೆಚ್ಚಾಗಿದೆ. ಈ ಪರಿಷ್ಕೃತ ದರದೊಂದಿಗೆ ಪ್ರತಿ ಸಿಲಿಂಡರ್ ಬೆಲೆ 3,113.5 ರೂ.ಗಳಿಗೆ ತಲುಪಿದೆ. ಬೆಂಗಳೂರಿನಲ್ಲಿ 46 ರೂ.ಗಳಷ್ಟು ಹೆಚ್ಚಳವಾಗಿ ಪ್ರತಿ ಸಿಲಿಂಡರ್ ದರ 3,198 ರೂ. ಗೆ ಏರಿಕೆಯಾಗಿದೆ.

ಇನ್ನು ವಾಣಿಜ್ಯ ಸಿಲಿಂಡರ್ ದರ ಏರಿಕೆಯು ಹೋಟೆಲ್, ರೆಸ್ಟೋರೆಂಟ್ ಮತ್ತು ಉದ್ಯಮಗಳಿಗೆ ಇನ್ನಷ್ಟು ಆರ್ಥಿಕ ಹೊರೆಯಾಗಿ ಪರಿಣಮಿಸಲಿದೆ. ಆದರೆ, ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೋಲ್ಕತ್ತಾದಲ್ಲಿ 19 ಕೆಜಿ ಸಿಲಿಂಡರ್ ದರ 53.5 ರೂ. ಏರಿಕೆಯಾಗಿದ್ದು, 3,255.5 ರೂ. ತಲುಪಿದೆ. ಇದರೊಂದಿಗೆ 5 ಕೆಜಿ ಫ್ರೀ ಟ್ರೇಡ್ ಎಲ್‌ಪಿಜಿ ಸಿಲಿಂಡರ್‌ಗಳ ಮೇಲಿನ ಬೆಲೆ 11 ರೂ. ಹೆಚ್ಚಿಸಿದ್ದು, ಪ್ರತಿ ಸಿಲಿಂಡರ್ ಬೆಲೆ 821.5 ರೂ.ಗಳಿಗೆ ತಲುಪಿದೆ.

Leave a Reply